ಜಿಲ್ಲಾ ಪೋಲೀಸ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ
ಒತ್ತಡ ನಿವಾರಣೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಶಿವಾಜಿ ಅನಂತ ನಲವಡೆ ಕರೆ
ವಿಜಯಪುರ ನ.23 : ರಕ್ಷಣೆ-ಶಾಂತಿ ಸುವ್ಯವಸ್ಥೆ ಕಾರ್ಯದಲ್ಲಿ ತೊಡಗಿರುವ ಪೆÇಲೀಸ್ ಅಧಿಕಾರಿ-ಸಿಬ್ಬಂದಿಗಳು ಸಹ ತಮ್ಮ ಒತ್ತಡದ ನಡುವೆಯೂ ಇಂತಹ ಕ್ರೀಯಾಶೀಲ-ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ಒತ್ತಡ ನಿವಾರಣೆಗೆ ಮುಂದಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಿವಾಜಿ ಅನಂತ ನಲವಡೆ ಅವರು ಸಲಹೆ ನೀಡಿದರು.
ಶನಿವಾರ ನಗರದ ಪೆÇೀಲಿಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾದ ಜಿಲ್ಲಾ ಪೆÇಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಕ್ರೀಡೆಗಳಿಂದ ದೇಹ ಸದೃಢತೆಯೊಂದಿಗೆ ಮಾನಸಿಕ ಸದೃಢತೆ ಕಾಯ್ದುಕೊಳ್ಳಲು ಸಹಕಾರಿಯಾಗಿದೆ. ಆರೋಗ್ಯಯುತ ಹಾಗೂ ಕ್ರಿಯಾಶೀಲತೆಯಿಂದಿರಲು ನಿರಂತರವಾಗಿ ಕ್ರೀಡೆ ಸೇರಿದಂತೆ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ಕ್ರೀಯಾಶೀಲ ಮನಸ್ಸನ್ನು ಹೊಂದಲು ಸಾಧ್ಯ. ಆರೋಗ್ಯಕರ ಮನಸ್ಸನ್ನು ಕಾಪಾಡಿಕೊಳ್ಳಲು ಕ್ರೀಡಾ ಚಟುವಟಿಕೆಗಳು ಸಹಕಾರಿಯಾಗಿವೆ ಎಂದು ಹೇಳಿದರು.
ಶಾಂತಿ ಸುವ್ಯವಸ್ಥೆ ಕಾಪಾಡಲು ಹಗಲು-ರಾತ್ರಿಯೆನ್ನದೇ, ದಿನದ 24 ಗಂಟೆಗಳ ಕಾಲ ಜನರ ಭದ್ರತೆಗಾಗಿ ಕಾರ್ಯನಿರ್ವಹಿಸುತ್ತಿರುವ ಪೆÇೀಲಿಸ್ ಇಲಾಖೆಯ ಕಾರ್ಯದೊಂದಿಗೆ, ತಮ್ಮ ವೈಯಕ್ತಿಕ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯವಶ್ಯಕವಾಗಿರುತ್ತದೆ. ಈ ಹಿನ್ನಲೆಯಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಹೆಚ್ಚೆಚ್ಚು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು. ಇದರಿಂದ ಆತ್ಮ ವಿಶ್ವಾಸ,ಸಾಮಾಜಿಕ ಸಂವಹನ ಕೌಶಲ್ಯ, ಶಿಸ್ತು, ನಾಯಕತ್ವದ ಗುಣ ಬೆಳೆಯುತ್ತದೆ.ಸತತ ಪ್ರಯತ್ನ,ಆತ್ಮ ವಿಶ್ವಾಸದಿಂದ ವೃತ್ತಿಯಲ್ಲಿಯೂ ನೈಪುಣ್ಯತೆಯೊಂದಿಗೆ ಸಾಧನೆ ಸಾಧ್ಯವಾಗುತ್ತದೆ. ಆ ಹಿನ್ನೆಲೆಯಲ್ಲಿ ನಮ್ಮ ಕೆಲಸ ಕಾರ್ಯಗಳಲ್ಲಿ ಈ ಗುಣಗಳನ್ನು ಬೆಳೆಸಿಕೊಳ್ಳಬೇಕು. ವೃತ್ತಿ ಜೀವನದ ಒತ್ತಡದ ಮಧ್ಯೆಯೂ ದೈಹಿಕ ಶ್ರಮ, ಕ್ರೀಡೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಇಲ್ಲಿ ಆಯೋಜಿಸಿರುವ ಕ್ರೀಡಾಕೂಟದಲ್ಲಿ ಎಲ್ಲರೂ ಕ್ರೀಡಾ ಮನೋಭಾವದಿಂದ ಭಾಗವಹಿಸಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಯಶಸ್ವಿಯಾಗಿ ಕ್ರೀಡಾಕೂಟ ನಡೆಸುವಂತೆ ಕರೆ ನೀಡಿದರು.
ಜಿಲ್ಲಾ ಪೆÇೀಲಿಸ್ ವರಿμÁ್ಠಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಸ್ವಾಗತಿಸಿ, ಈ ಕ್ರೀಡಾಕೂಟಗಳಲ್ಲಿ ಆಸಕ್ತಿಯಿಂದ ಭಾಗವಹಿಸಬೇಕು. ಸೋಲು-ಗೆಲುವನ್ನು ಲೆಕ್ಕಿಸದೇ ಸ್ಪೂರ್ತಿ, ಚೈತನ್ಯದಿಂದ ಮೂರು ದಿನಗಳ ಕಾಲ ನಡೆಯುವ ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ಎಂದು ಹೇಳಿದರು.
ಇದಕ್ಕೂ ಮೊದಲು ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ವಿಜೇತರು ಕ್ರೀಡಾ ಜ್ಯೋತಿಯನ್ನು ನೀಡುವುದರ ಮೂಲಕ ಕ್ರೀಡಾಕೂಟಕ್ಕೆ ವಿದ್ಯುಕ್ತ ಚಾಲನೆ ದೊರೆಯಿತು. ಕ್ರೀಡಾಪಟುಗಳಿಂದ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ಹೆಚ್ಚುವರಿ ಜಿಲ್ಲಾ ಪೆÇಲೀಸ್ ವರಿμÁ್ಠದಿಕಾರಿಗಳಾದ ಶಂಕರ ಮಾರಿಹಾಳ, ರಾಮನಗೌಡ ಹಟ್ಟಿ, ಸೈನಿಕ ಶಾಲೆಯ ಪ್ರಾಂಶುಪಾಲರಾದ ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಬಿಷ್ಟ, ಎನ್.ಸಿ.ಸಿ. ಅಧಿಕಾರಿ ಗಿರೀಶ ಶಿಂಧೆ, ಕೇಂದ್ರ ಕಾರಾಗೃಹದ ಅಧೀಕ್ಷಕರಾದ ಬಿ.ಎಂ ಕೊಟ್ರೇಶ, ಪೆÇಲೀಸ್ ಇಲಾಖೆಯ ಅಧಿಕಾರಿಗಳು, ನಿವೃತ್ತ ಪೆÇಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.