• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಗ್ರಾಮ ಮಟ್ಟದ ಜನರ ಜೀವನ ಮಟ್ಟ ಸುಧಾರಣೆಗೆ ಆದ್ಯತೆ ನೀಡುವಂತೆ -ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ

      Voiceofjanata.in

      December 3, 2024
      0
      ಗ್ರಾಮ ಮಟ್ಟದ ಜನರ ಜೀವನ ಮಟ್ಟ ಸುಧಾರಣೆಗೆ ಆದ್ಯತೆ ನೀಡುವಂತೆ -ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ
      0
      SHARES
      50
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಮ ಮಟ್ಟದ ಜನರ ಜೀವನ ಮಟ್ಟ ಸುಧಾರಣೆಗೆ ಆದ್ಯತೆ ನೀಡುವಂತೆ -ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ

      ವಿಜಯಪುರ, ಡಿ.02 : ಜಿಲ್ಲೆಯ ಗ್ರಾಮ ಮಟ್ಟದ ಜನರ ಜೀವನ ಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಆದ್ಯತೆ ಮೇಲೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಕ್ರಮ ವಹಿಸುವಂತೆ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಗ್ರಾಮೀಣ ಭಾಗದ ಜನರು ಯಾವುದೇ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಾಮಾಜಿಕ ಕಳಕಳಿಯೊಂದಿಗೆ ಜವಾಬ್ದಾರಿಯನ್ನು ನಿರ್ವಹಿಸಬೇಕು. ಗ್ರಾಮೀಣ ಭಾಗದಲ್ಲಿ ಸ್ವಚ್ಚತೆಗೆ ಪ್ರಥಮಾದ್ಯತೆ ನೀಡಬೇಕು. ಜಿಲ್ಲೆಯಾದ್ಯಂತ ಪೂರ್ಣ ಪ್ರಮಾಣದಲ್ಲಿ ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳನ್ನಾಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಚರಂಡಿಯ ನೀರು ಒಂದೆಡೆ ನಿಲ್ಲದೇ ಸರಾಗವಾಗಿ ಹರಿಯುವ ವ್ಯವಸ್ಥೆ ಮಾಡಿ, ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಅವರು ಸೂಚಿಸಿದರು.

      ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಅವಿಭಕ್ತ ಕುಟುಂಬಗಳು ವಾಸಿಸುತ್ತಿದ್ದು, ಇಂತಹ ಕುಟುಂಬಗಳಿಗೆ ಸಮುದಾಯ ಶೌಚಾಲಯ ನಿರ್ಮಿಸಿ, ಸೌಕರ್ಯಗಳನ್ನು ಒದಗಿಸುವುದನ್ನು ಸಂಬAಧಿಸಿದ ಗ್ರಾಮ ಪಂಚಾಯತಿಗಳು ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಶೌಚಾಲಯ ಬಳಕೆ ಕುರಿತು ಜಾಗೃತಿ ಮೂಡಿಸಬೇಕು. ಜಿಲ್ಲೆಯಲ್ಲಿ ನಿಗದಿತ ನಮೂನೆಯನ್ನು ರೂಪಿಸಿಕೊಂಡು ಜಿಲ್ಲೆಯಾದ್ಯಂತ ಶೌಚಾಲಯ ಬಳಸದೇ ಇರುವ ಕುಟುಂಬಗಳನ್ನು ಗುರುತಿಸಿ ತಿಳುವಳಿಕ-ಜಾಗೃತಿ ಮೂಡಿಸಬೇಕು. ಈ ಕುರಿತು ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತೀವ್ರ ನಿಗಾ ವಹಿಸುವಂತೆ ಅವರು ಸೂಚನೆ ನೀಡಿದರು.
      ನಗರ ಸ್ವಚ್ಛತೆಗೂ ಆದ್ಯತೆ ನೀಡಬೇಕು. ಅಧಿಕಾರಿಗಳು ಚಾಕಚಕ್ಯತೆಯಿಂದ ಕಾರ್ಯನಿರ್ವಹಿಸಬೇಕು. ಶ್ರದ್ಧೆಯಿಂದ ಆತ್ಮಸಾಕ್ಷಿಗನುಗುಣವಾಗಿ ಕಾರ್ಯನಿರ್ವಹಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಉತ್ತಮ ಆಡಳಿತ ನೀಡಲು ಮುಂದಾಗುವAತೆ ಅವರು ಸಲಹೆ ನೀಡಿದರು.
      ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಕಡಿವಾಣಕ್ಕೆ ಅಗತ್ಯ ಕ್ರಮ ವಹಿಸಬೇಕು. ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕಾರ್ಯಕ್ರಮಗಳನ್ನು ಆಯೋಜಿಸಿ ದುಶ್ಚಟಗಳ ಕಡಿವಾಣಕ್ಕೆ ಕ್ರಮ ವಹಿಸುವಂತೆ ಸೂಚನೆ ನೀಡಿದ ಅವರು, ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ಸಾಮಾಜಿಕ ಬದ್ಧತೆಯನ್ನಾಗಿ ಪರಿಗಣಿಸಿ ಕಾರ್ಯಕ್ರಮ ರೂಪಿಸಿ ಜನರಲ್ಲಿ ಜಾಗೃತಿ ಮೂಡಿಸುವಂತೆ ಅವರು ಹೇಳಿದರು.
      ರೈತರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ವಿದ್ಯುತ್ ಪರಿವರ್ತಕಗಳಿಗೆ ರೈತರು ಹೆಸ್ಕಾಂಗೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಪರಿಶೀಲನೆ ನಡೆಸಿ, ಆದ್ಯತೆ ಮೇಲೆ ರೈತರ ಬೇಡಿಕೆಗನುಗುಣವಾಗಿ ವಿದ್ಯುತ್ ಪರಿವರ್ತಕಗಳನ್ನು ಒದಗಿಸಲು ಕ್ರಮ ವಹಿಸಬೇಕು. ಬಾಕಿ ಇರುವ ಅರ್ಜಿಗಳ ತ್ವರಿತ ವಿಲೇವಾರಿಗೆ ಕ್ರಮ ವಹಿಸಬೇಕು. ಬಾಕಿ ಇರುವ ಅರ್ಜಿಗಳ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಹೆಸ್ಕಾಂ ಅಧೀಕ್ಷಕ ಅಭಿಯಂತರರಿಗೆ ಸೂಚನೆ ನೀಡಿದರು.

      ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸಬೇಕು. ಕಬ್ಬು ಪೂರೈಸುವ ರೈತರಿಗೆ ನಿಗದಿತ ದರ ಪಾವತಿಸಲು ಕ್ರಮ ವಹಿಸಬೇಕು. ಕಬ್ಬು ಪೂರೈಸುವ ರೈತರಿಗೆ ತೂಕದಲ್ಲಿ ಯಾವುದೇ ತೊಂದರೆಯಾಗದAತೆ ನೋಡಿಕೊಂಡು ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಸಿಸಿಟಿವಿ ನಿಗಾವಣೆಯಲ್ಲಿ ತೂಕ ಮಾಡಬೇಕು. ಕಾರ್ಖಾನೆಗಳು ರೈತರಿಗೆ ನಿಗದಿತ ಅವಧಿಯಲ್ಲಿ ಹಣ ಸಂದಾಯ ಮಾಡಬೇಕು. ಸಕ್ಕರೆ ಕಾರ್ಖಾನೆಗಳಿಗೆ ಅಧಿಕಾರಿಗಳು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಅವರು ಹೇಳಿದರು.
      ಜಿಲ್ಲಾಸ್ಪತ್ರೆ ಕಾರ್ಯವೈಖರಿಗೆ ಪ್ರಶಂಸೆ : ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಲೋಕಾಯುಕ್ತ ಬಿ.ಎಸ್.ಪಾಟೀಲ ಅವರು ಜಿಲ್ಲೆಯ ಜಿಲ್ಲಾ ಆಸ್ಪತ್ರೆಯ ಕಾರ್ಯವೈಖರಿ ಕುರಿತು ಪ್ರಶಂಸೆ ವ್ಯಕ್ತಪಡಿಸಿ, ಪ್ರತಿದಿನ ಆಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಸೇರಿದಂತೆ ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಗುಣಮಟ್ಟದ ಆಹಾರ ನೀಡುವ ಮೂಲಕ ಮತ್ತಷ್ಟು ಕಾರ್ಯಕ್ಕೆ ಮುಂದಾಗಬೇಕು ಎಂದು ಅವರು ಹೇಳಿದರು.
      ಜಿಲ್ಲೆಯಲ್ಲಿ ಅರಣ್ಯೀಕರಣಕ್ಕೆ ಒತ್ತು ನೀಡಬೇಕು. ವರ್ಷಕ್ಕೆ 5 ಲಕ್ಷ ಸಸಿ ನೆಡುವ ಗುರಿ ಹಾಕಿಕೊಳ್ಳುವ ಮೂಲಕ ಅರಣ್ಯೀಕರಣಕ್ಕೆ ಮುಂದಾಗಬೇಕು. ನರೇಗಾ ಯೋಜನೆಯಡಿ ಸಾಮಾಜಿಕ ಹಾಗೂ ಪ್ರಾದೇಶಿಕ ಅರಣ್ಯ ವಿಭಾಗದಲ್ಲಿ 1.30 ಲಕ್ಷ ಸಸಿಗಳನ್ನು ನೆಟ್ಟು ಬೆಳೆಸುವ ಗುರಿ ಹಾಕಿಕೊಂಡಿರುವುದಕ್ಕೆ ಲೋಕಾಯುಕ್ತರು ಪ್ರಶಂಸೆ ವ್ಯಕ್ತಪಡಿಸಿದರು.
      ಮುಂದಿನ ಮಳೆಗಾಲದಲ್ಲಿ 1.25 ಲಕ್ಷ ಸಸಿಗಳನ್ನು ಪ್ರಾದೇಶಿಕ ಅರಣ್ಯ ವಿಭಾಗದಿಂದ ಗುರಿ ಹಾಕಿಕೊಳ್ಳಲಾಗಿದೆ ಎಂದು ಕೆ.ಶಿವಶರಣಯ್ಯ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮಾಹಿತಿ ನೀಡಿದರು.

      ಸಕಾಲ ಯೋಜನೆಯಡಿ ಸ್ವೀಕರಿಸುವ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ಇತ್ಯರ್ಥಪಡಿಸಬೇಕು. ಯಾವುದೇ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳದೇ ಇತ್ಯರ್ಥಪಡಿಸಬೇಕು. ಸಾರ್ವಜನಿಕ ಕಟ್ಟಡಗಳ ನಿರ್ಮಾಣ, ರಸ್ತೆ, ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಬೇಕು. ಈ ಕುರಿತು ಸಂಬAಧಿಸಿದ ಮೇಲಾಧಿಕಾರಿಗಳು ನಿಗಾ ವಹಿಸಬೇಕು. ಸರ್ಕಾರಿ ಶಾಲೆ, ಅಂಗನವಾಡಿ, ವಸತಿ ನಿಲಯಗಳಲ್ಲಿ ಸ್ವಚ್ಛತೆ, ಗುಣಮಟ್ಟ ಆಹಾರಕ್ಕೆ ಆದ್ಯತೆ ನೀಡಬೇಕು. ಸಮರ್ಪಕವಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಜಿಲ್ಲೆಯಲ್ಲಿರುವ ಶಿಥಿಲಾವ್ಯವಸ್ಥೆಯಲ್ಲಿರುವ ಶಾಲಾ ಕಟ್ಟಡಗಳ ದುರಸ್ತಿ, ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸಮೀಕ್ಷೆ ನಡೆಸಿ, ಆದ್ಯತೆ ಮೇಲೆ ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕು. ಜಲಮೂಲಗಳ ಸಂರಕ್ಷಣೆ ನಮ್ಮ ಜವಾಬ್ದಾರಿಯಾಗಿದ್ದು, ಜಿಲ್ಲೆಯಲ್ಲಿರುವ ಕೆರೆ-ಕಟ್ಟೆಗಳ ಸಮೀಕ್ಷೆ ನಡೆಸುವ ಮೂಲಕ ಜೀವಜಲ ಸಂರಕ್ಷಣೆಗೆ ಆದ್ಯತೆ ನೀಡುವಂತೆ ಅವರು ಸೂಚನೆ ನೀಡಿದರು.

      ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಾತನಾಡಿ, ಈಗಾಗಲೇ ಕಬ್ಬು ನುರಿಸುವ ಹಂಗಾಮಿಗೆ ಸಂಬAಧಿಸಿದAತೆ ಹಲವು ಬಾರಿ ಕಬ್ಬು ಬೆಳೆಗಾರರು ಹಾಗೂ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಲಾಗಿದ್ದು, ಕಾರ್ಖಾನೆಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಕಬ್ಬು ನುರಿಸುವ ಕಾರ್ಖಾನೆಗಳು ಎಲ್ಲ ನಿಯಮಗಳನ್ನು ಪಾಲಿಸುತ್ತಿರುವ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಈಗಾಗಲೇ ಸೂಚನೆ ನೀಡಿದ್ದರ ಮೇರೆಗೆ ಹಲವು ಬಾರಿ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು, ತೂಕ ಮತ್ತು ಅಳತೆ ಮಾಪನ ಇಲಾಖೆ ಅಧಿಕಾರಿಗಳು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದಾರೆ. ಜಿಲ್ಲೆಯ ಕೆರೆಗಳ ಸಂರಕ್ಷಣೆಗಾಗಿ ಈಗಾಗಲೇ ತಮ್ಮ ನಿರ್ದೇಶನದಂತೆ ತಾಲೂಕಾ ಮಟ್ಟದಲ್ಲಿ ಸಮಿತಿ ರಚಿಸಿಕೊಂಡು ಕೆರೆಗಳ ಪುನಶ್ಚೇತನಕ್ಕಾಗಿ ಕೆರೆ ಅಭಿವೃದ್ದಿಗೆ ಕ್ರಮ ವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

      ಈ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ ಅವರು ಸಾರ್ವಜನಿಕರ ಕುಂದು-ಕೊರತೆ, ಅಹವಾಲುಗಳನ್ನು ಆಲಿಸಿ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
      ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣಬ ನಿಂಬರಗಿ, ಕರ್ನಾಟಕ ಲೋಕಾಯುಕ್ತ ವಿಜಯಪುರ ಪೊಲೀಸ್ ಅಧೀಕ್ಷಕ ಟಿ.ಮಲ್ಲೇಶ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ ಲೋಕಾಯುಕ್ತ ಡಿವೈಎಸ್‌ಪಿ ಸುರೇಶ ರೆಡ್ಡಿ, ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Karnataka Lokayukta Justice B.S.Patil instructs to give priority to improving the living standards of people at the village level#Public News#State News#Today News#Voice Of Janata Desk News#Voiceofjanata.in#ಗ್ರಾಮ ಮಟ್ಟದ ಜನರ ಜೀವನ ಮಟ್ಟ ಸುಧಾರಣೆಗೆ ಆದ್ಯತೆ ನೀಡುವಂತೆ -ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.