ಕಮಲಾಪುರ್ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಒದಗಿಸಿ
ಕಮಲಾಪುರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಗೆ ಶೀಘ್ರವಾಗಿ ಪರಿಹಾರ ಒದಗಿಸಬೇಕು ಎಂದು ಕಮಲಾಪುರ ಮಾಜಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಅಬ್ದುಲ್ ಸತ್ತಾರ್ ಆಗ್ರಹಿಸಿದ್ದಾರೆ.
ಇಲ್ಲಿನ ಬಸ್ ನಿಲ್ದಾಣದ ಬಳಿ ಪ್ರತಿನಿತ್ಯ ಸಾವಿರಾರು ಜನರು ಸಂಚರಿಸುತ್ತಿದ್ದಾರೆ ಅಲ್ಲದೆ ರಾಷ್ಟ್ರೀಯ ಹೆದ್ದಾರಿ ಇರುವುದರಿಂದ ಭಾರಿ ಪ್ರಮಾಣದ ಹಾಗೂ ದ್ವಿಚಕ್ರ ವಾಹನಗಳ ಓಡಾಟವೂ ಹೆಚ್ಚಾಗಿದೆ, ಇಲ್ಲಿನ ಬಸ್ ನಿಲ್ದಾಣದ ಬಳಿ ಯ ಹೆದ್ದಾರಿಯಲ್ಲಿ ಡಿವೈಡರ್ ಇಲ್ಲದ ಕಾರಣ ವಾಹನಗಳ ಓಡಾಟ ಮನಬಂದಂತೆ ಸಾಗಿದೆ, ವಾಹನಗಳ ಅಡ್ಡ ದಿಡ್ಡಿ ಓಡಾಟದ ಪರಿಣಾಮವಾಗಿ ಹಲವಾರು ಅಪಘಾತಗಳು ಉಂಟಾಗಿವೆ ಇದರಿಂದ ಪಾದ ಚಾರಿಗಳಿಗೆ ಸಾಕಷ್ಟು ತೊಂದರೆ ಆಗುತ್ತಿದೆ, ಇಲ್ಲಿನ ಸಾರ್ವಜನಿಕ ಬಸ್ ನಿಲ್ದಾಣ ಚಿಕ್ಕದಾಗಿರುವುದರಿಂದ ಹೀಗಾಗಿ ಶೀಘ್ರವಾಗಿ ಇಲ್ಲಿನ ಟ್ರಾಫಿಕ್ ಸಮಸ್ಯೆ ಬಗೆಹರಿಸಬೇಕು ಹಾಗೂ ಕಮಲಾಪುರದಲ್ಲಿ ತಾಲೂಕು ಮಟ್ಟದ ಬಸ್ ನಿಲ್ದಾಣವನ್ನು ನಿರ್ಮಿಸಿ ಉತ್ತಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಒಂದು ವೇಳೆ ವಿಳಂಬ ಧೋರಣೆ ತೋರಿದರೆ ಸಾರ್ವಜನಿಕರೊಂದಿಗೆ ಹೆದ್ದಾರಿ ತಡೆದು ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ