• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಸಮರ್ಪಕವಾಗಿ ಜಾರಿಗೊಳಿಸಿ-ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      Voiceofjanata.in

      December 6, 2024
      0
      ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಸಮರ್ಪಕವಾಗಿ ಜಾರಿಗೊಳಿಸಿ-ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
      0
      SHARES
      86
      VIEWS
      Share on FacebookShare on TwitterShare on whatsappShare on telegramShare on Mail

      ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಸಮರ್ಪಕವಾಗಿ ಜಾರಿಗೊಳಿಸಿ-ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ವಿಜಯಪುರ, ಡಿಸೆಂಬರ್ 05 : ಅನಧಿಕೃತವಾಗಿ ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಅಪರಾಧವಾಗಿದ್ದು, ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಿ, ಸಂಬಂಧಿಸಿದ ಅಧಿಕಾರಿಗಳು ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.

      ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಿಸಿಪಿಎನ್‍ಡಿಟಿ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಕಾಯ್ದೆಯನ್ವಯ ಅಪರಾಧವಾಗಿದ್ದು, ಒಂದು ವೇಳೆ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು ಅಂತಹವರ ಮೇಲೆ ಕಾಯ್ದೆಯನ್ವಯ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

      ಅಧಿಕಾರಿಗಳು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಕ್ಯಾನಿಂಗ್ ಕೇಂದ್ರಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅನಿರೀಕ್ಷಿತವಾಗಿ ಭೇಟಿ ನೀಡುವ ಮೂಲಕ ಕೇಂದ್ರಗಳಲ್ಲಿ ಕಾಯ್ದೆಯನ್ವಯ ನಿಯಮಗಳನ್ನು ಪಾಲಿಸಲಾಗುತ್ತಿವೆಯೇ, ಇಲ್ಲ ಎಂಬುದನ್ನು ಹಾಗೂ ಸ್ಕ್ಯಾನಿಂಗ್ ಕೇಂದ್ರಗಳು ಕಡ್ಡಾಯವಾಗಿ ನೊಂದಣಿಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಗೋಚರಿಸುವ ಹಾಗೆ ಮಾಹಿತಿ ಫಲಕಗಳು, ನಿಗದಿತ ನಮೂನೆಗಳ ನಿರ್ವಹಣೆ ಸೇರಿದಂತೆ ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನ ನೀಡುವಂತೆ ಸೂಚನೆ ನೀಡಿದ ಅವರು, ಅನಧಿಕೃತವಾಗಿ ಸ್ಕ್ಯಾನಿಂಗ್ ಮಾಡುವವರ ಮೇಲೆ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
      ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಕ್ಯಾನಿಂಗ್ ಕೇಂದ್ರಗಳ ನವೀಕರಣಕ್ಕಾಗಿ ಹಾಗೂ ಹೊಸದಾಗಿ ಕೇಂದ್ರಗಳ ಸ್ಥಾಪನೆಗೆ ಬಂದಿರುವ ಅರ್ಜಿಗಳನ್ನು, ದಾಖಲೆಗಳನ್ನು ಪರಿಶೀಲನೆ ನಡೆಸಬೇಕು. ಈ ಕುರಿತು ರಚಿಸಲಾದ ಸಮಿತಿ ಸದಸ್ಯರ ಪರಿಶೀಲನಾ ಮಾಹಿತಿ ದೃಢೀಕರಣ ಸಹಿತ ವರದಿ ಸಲ್ಲಿಸಬೇಕು. ವರದಿ ಆಧರಿಸಿ ಕ್ರಮ ವಹಿಸಿ, ತಪಾಸಣಾ ವರದಿ ಪುರ್ಣ ಪ್ರಮಾಣದಲ್ಲಿ ದೊರಕಬೇಕು. ನಿರಾಪೇಕ್ಷಣಾ ಪತ್ರ ನೀಡುವಾಗ ಅಗತ್ಯ ದಾಖಲೆಗಳನ್ನು ಪರಿಶೀಲನೆ ನಡೆಸಿ, ಜಿಲ್ಲಾ ಮಟ್ಟದ ಸಮಿತಿಗೆ ಸಲ್ಲಿಸಬೇಕು. ಈ ಅರ್ಜಿಗಳ ಕುರಿತು ಸಭೆಯಲ್ಲಿ ಕೂಲಂಕೂಷವಾಗಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

      ಪಿಸಿಪಿಎನ್‍ಡಿಸಿ ಕಾಯ್ದೆಯ ಕುರಿತು ಜಿಲ್ಲೆಯಾದ್ಯಂತೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಿಗೆ ಕಾಯ್ದೆಯ ಕುರಿತು ತಿಳುವಳಿಕೆ ಮೂಡಿಸಬೇಕು. ಕಾಯ್ದೆಯ ನಿಯಮಗಳ ಕುರಿತು ಕರಪತ್ರಗಳನ್ನು ಮುದ್ರಿಸಿ ಜನನಿಬಿಡ ಪ್ರದೇಶಗಳಾದ ಬಸ್‍ನಿಲ್ದಾಣ, ರೈಲು ನಿಲ್ದಾಣ ಒಳಗೊಂಡಂತೆ ವಿವಿಧ ಸ್ಥಳಗಳಲ್ಲಿ ಪ್ರಚುರಪಡಿಸುವ ಮೂಲಕ ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸಬೇಕು. ಲಿಂಗಾನುಪಾತದ ಸಮಾನತೆ ಕಾಪಾಡಲು ಜಾಗೃತಿ ಅಭಿಯಾನ ಕೈಗೊಳ್ಳಬೇಕು. ರೇಡಿಯೋ ಜಿಂಗಲ್ಸ್ ಮೂಲಕ ಪ್ರಚುರಪಡಿಸಬೇಕು. ಜನನಿಬಿಡ ಪ್ರದೇಶಗಳಲ್ಲಿ ವಿಡಿಯೋ ಪ್ರದರ್ಶನ ಮೂಲಕ ಜಾಗೃತಿ ಮೂಡಿಸುವಂತೆ ಅವರು ಸೂಚನೆ ನೀಡಿದರು.

      ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಗುಣಾರಿ, ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ವರಿ ಗೊಲಗೇರಿ, ಪಿಸಿಪಿಎನ್‍ಡಿಟಿಯ ತಪಾಸಣಾ ಹಾಗೂ ಮೇಲ್ವಿಚಾರಣಾ ಸಮಿತಿ ಸದಸ್ಯರಾದ ಟಿ.ಪಿ.ನಾಯ್ಡು, ಡಾ.ಶೈಲಜಾ ಬಿದರಿ, ಡಾ.ರವಿಕುಮಾರ ನಾಗನೂರ, ಪೀಟರ್ ಅಲೆಕ್ಸಾಂಡರ್, ಎಸ್.ಜಿ.ರೂಡಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

      Tags: #Adequately implement the Fetal Gender Detection Prohibition Act-District Officer T. Bhubalan instructs#Public News#Today News#Voice Of Janata#Voiceofjanata.in#ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಸಮರ್ಪಕವಾಗಿ ಜಾರಿಗೊಳಿಸಿ-ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.