ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ..! ಕಾರಣ ಗೊತ್ತಾ..?
ಇಂಡಿ: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಬಾರದ ಕಾರಣ ತೀವ್ರ ತೊಂದರೆಯಾಗುತ್ತಿದ್ದು, ಕೂಡಲೇ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಅಭಾವಿಪ ಕಾರ್ಯಕರ್ತರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು.
ನಂತರ ವಿದ್ಯಾರ್ಥಿ ಮುಖಂಡ ಸಚಿನ ದಾನಗೊಂಡ ಮಾತನಾಡಿ, ಗ್ರಾಮೀಣ ಭಾಗದಿಂದ ಪಟ್ಟಣಕ್ಕೆ ಶಾಲಾ ಕಾಲೇಜಿಗೆ ಆಗಮಿಸುತ್ತಿರುವ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಲಭ್ಯವಾಗದ ಕಾರಣ ತರಗತಿಯ ಅವಧಿ ಸರಿಯಾಗಿ ಸಿಗುತ್ತಿಲ್ಲ, ಈ ಕುರಿತು ಡಿಪೋ ಮ್ಯಾನೇಜರ್ ಅವರಿಗೆ ತಿಳಿಸಿದರು ಸಹ ಯಾವುದೇ ಪ್ರಯೋಜನವಾಗಿಲ್ಲ, ಸರಕಾರ ಶಕ್ತಿ ಯೋಜನೆಯ ಹೆಸರಿನಲ್ಲಿ ಮಹಿಳೆಯರಿಗೆ ಉಚಿತ ವ್ಯವಸ್ಥೆ ಕಲ್ಪಿಸಿದ್ದರಿಂದ, ವಿದ್ಯಾರ್ಥಿಗಳಿಗೂ ಸಾಕಷ್ಟು ತೊಂದರೆಯಾಗುತ್ತಿದೆ. ಇಂಡಿ ಬಸ್ ಘಟಕಕ್ಕೆ ಇನ್ನಷ್ಟು ಬಸ್‌ಗಳನ್ನು ಹೆಚ್ಚಿಸಿಕೊಂಡು ಎಲ್ಲಾ ಮಾರ್ಗಗಳಲ್ಲಿ ಬಸ್ ಓಡಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ನಗರ ಕಾರ್ಯದರ್ಶಿ ಗಣೇಶ ಹಂಜಗಿ, ಸಮರ್ಥ ಗಾಯಕವಾಡ, ಚಂದ್ರಕಾAತ ಕಾಂಬಳೆ, ರಾಹುಲ್ ಜಾಧವ, ಸೋಮನಾಥ, ಗಂಗಾ, ದೀಪಾ, ರಕ್ಷೀತಾ, ಸುಭ್ರಾ ಸೇರಿದಂತೆ ಅನೇಕರು ಕಾರ್ಯಕರ್ತರು ಇದ್ದರು.
ಇಂಡಿ: ಪಟ್ಟಣದಲ್ಲಿ ಅಭಾವಿಪ ಕಾರ್ಯಕರ್ತರು ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು.



















