• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಡಿ-25-26 ರಂದು ಆರ್.ಡಿ.ಪಿ.ಆರ್. ಕ್ರೀಡಾಕೂಟ-2024 ಉದ್ಘಾಟನಾ ಸಮಾರಂಭಕ್ಕೆ ಚಾಲನೆ

      Voiceofjanata.in

      December 24, 2024
      0
      ಡಿ-25-26 ರಂದು ಆರ್.ಡಿ.ಪಿ.ಆರ್. ಕ್ರೀಡಾಕೂಟ-2024 ಉದ್ಘಾಟನಾ ಸಮಾರಂಭಕ್ಕೆ ಚಾಲನೆ
      0
      SHARES
      95
      VIEWS
      Share on FacebookShare on TwitterShare on whatsappShare on telegramShare on Mail

      ಡಿಸೆಂಬರ್ 24, 25 ಮತ್ತು 26 ರಂದು ನಡೆಯಲಿರುವ 4ನೇ ವಾರ್ಷಿಕ ಆರ್.ಡಿ.ಪಿ.ಆರ್. ಕ್ರೀಡಾಕೂಟ-2024 ಉದ್ಘಾಟನಾ ಸಮಾರಂಭಕ್ಕೆ ಚಾಲನೆ ಜಿಲ್ಲೆಯ ಪೋಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ.

      ವಿಜಯಪುರ: ಇಂದು ದಿನಾಂಕ 24.12.2024 ರಂದು ಜಿಲ್ಲಾ ಪಂಚಾಯತಿ ಮೈದಾನದಲ್ಲಿ 4ನೇ ವಾರ್ಷಿಕ ಆರ್.ಡಿ.ಪಿ.ಆರ್. ಕ್ರೀಡಾಕೂಟ-2024 ನ್ನು ವಿಜಯಪುರ ಜಿಲ್ಲೆಯ ಪೋಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ರವರು ಉದ್ಘಾಟಿಸಿದರು.

      ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯತಿ ವಿಜಯಪುರ, ಆರ್.ಡಿ.ಪಿ.ಆರ್. ಇಲಾಖೆಯ ಎಲ್ಲ ವೃಂದ ಸಂಘಗಳ ಹಾಗೂ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ಡಿಸೆಂಬರ್ 24, 25 ಮತ್ತು 26 ರಂದು ನಡೆಯಲಿರುವ 4ನೇ ವಾರ್ಷಿಕ ಕ್ರೀಡಾಕೂಟ-2024 ಉದ್ಘಾಟನಾ ಸಮಾರಂಭವನ್ನು ಬಲೂನಗಳನ್ನು ಆಕಾಶದಲ್ಲಿ ಹಾರಿಬಿಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ರವರು ಮಾತನಾಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಗ್ರಾಮೀಣ ಮಟ್ಟದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಲು ನಿಮ್ಮೆಲ್ಲರಿಗೂ ಅವಕಾಶ ಸಿಕ್ಕಿದೆ. ಪ್ರತಿದಿನ ನಿರಂತರ ಕೆಲಸದ ಒತ್ತಡದಲ್ಲಿ ಆರೋಗ್ಯದ ಕಡೆಗೂ ಸಹ ಗಮನ ವಹಿಸಬೇಕು. ಇದಕ್ಕೆ ಪೂರಕವಾಗಿ ಇಂತಹ ಕ್ರೀಡೆಗಳಲ್ಲಿ ಭಾಗವಹಿಸಿ, ಸದೃಢರಾಗಬೇಕು. ನಮ್ಮ ದೇಹ ಸದೃಢ ಇದ್ದಾಗ ಮಾತ್ರ ನಮ್ಮ ಕುಟುಂಬದ ಆರೋಗ್ಯ ಸ್ಥಿರವಾಗಿರಲು ಸಾಧ್ಯ. ಕ್ರೀಡಾಕೂಟದಲ್ಲಿ ಸಾಕಷ್ಟು ಕಲಿಕೆಗಳಿರುತ್ತವೆ. ಜೊತೆಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ದೇಹಕ್ಕೆ ಬಹಳ ಲಾಭಗಳಿರುತ್ತವೆ. ಆದ್ದರಿಂದ ಈ 3 ದಿನಗಳ ಕ್ರೀಡಾಕೂಟದಲ್ಲಿ ಅತ್ಯಂತ ಕ್ರಿಯಾಶೀಲರಾಗಿ ಭಾಗವಹಿಸಿ ಎಂದರು.

      ಬಳಿಕ ಜಿ.ಪಂ. ಸಿಇಓ ರಿಷಿ ಆನಂದ ರವರು, ನಾವೆಲ್ಲರೂ ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಸುಮಾರು ಒಂದು ವರ್ಷಗಳಿಂದ ಕಾಯುತ್ತಿದ್ದೇವೆ. ಇದೀಗ ಪ್ರಾರಂಭವಾಗಿರುವುದು ನಮಗೆ ಅತೀ ಸಂತಸದ ವಿಷಯ. ಈ ಕ್ರೀಡಾ ಕೂಡದಲ್ಲಿ ಸಾಕಷ್ಟು ಪಂದ್ಯಗಳನ್ನು ಏರ್ಪಡಿಸಿದ್ದೇವೆ. ಈ ಎಲ್ಲ ಕ್ರೀಡೆಗಳಿಂದ ನಮ್ಮ ಆರೋಗ್ಯಕ್ಕೆ ತುಂಬಾ ಉಪಯುಕ್ತವಿದೆ. ಕ್ರೀಡೆಯು ಪ್ರತಿಯೊಬ್ಬರ ಜೀವನದಲ್ಲಿ ವಿಶೇಷ ಪಾತ್ರವನ್ನು ವಹಿಸುತ್ತದೆ ಏಕೆಂದರೆ ಕ್ರೀಡೆಗಳು ಯಾವಾಗಲೂ ಒಬ್ಬ ವ್ಯಕ್ತಿಯನ್ನು ಆರೋಗ್ಯಕರವಾಗಿ, ಸಮೃದ್ಧವಾಗಿ ಮತ್ತು ಕ್ರಿಯಾಶೀಲವಾಗಿರುವಂತೆ ಮಾಡುತ್ತದೆ. ಆರೋಗ್ಯವಂತ ದೇಹದಿಂದ ಮಾತ್ರ ಮನಸ್ಸು ಆರೋಗ್ಯವಾಗಿರಲು ಸಾಧ್ಯ. ನಾವು ಎಲ್ಲಾ ಸಮಯದಲ್ಲೂ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡಾಗ ಮಾತ್ರ ನಾವು ಜೀವನದಲ್ಲಿ ಉತ್ತಮ ಸಾಧನೆಗಳನ್ನು ಸಾಧಿಸಬಹುದು. ಆದ್ದರಿಂದ ಜೀವನದಲ್ಲಿ ಕ್ರೀಡೆಗಳು ಅವಶ್ಯಕ. ಕ್ರೀಡೆ ನಮ್ಮನ್ನು ಆರೋಗ್ಯಕರವಾಗಿ ಮತ್ತು ಫಿಟ್ ಆಗಿಸುತ್ತದೆ. ಇದು ಮನರಂಜನೆ ಮತ್ತು ದೈಹಿಕ ಚಟುವಟಿಕೆಯ ಅತ್ಯಂತ ಉಪಯುಕ್ತ ಸಾಧನವಾಗಿದೆ. ಬ್ಯಾಸ್ಕೆಟ್‌ಬಾಲ್, ಫುಟ್‌ಬಾಲ್, ವಾಲಿಬಾಲ್, ಕ್ರಿಕೆಟ್ ಇತ್ಯಾದಿಗಳು ಕೆಲವು ಪ್ರಸಿದ್ಧ ಕ್ರೀಡೆಗಳಾಗಿವೆ. ಇವತ್ತು ಜಿಲ್ಲೆಯ 13 ತಾಲೂಕುಗಳಿಂದ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಭಾಗವಹಿಸುತ್ತಿರುವುದು ಬಹಳ ಹೆಮ್ಮೆಯ ವಿಷಯ. ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಾವು ಪ್ರತಿನಿತ್ಯ ನಮ್ಮ ನಮ್ಮ ಕೆಲಸಗಳಲ್ಲಿ ನಿರತರಾಗಿರುತ್ತೇವೆ. ಇದರ ಮಧ್ಯ ನಮ್ಮಲ್ಲಿ ವಿವಿಧ ಸಾಂಸ್ಕೃತಿಕ ಪ್ರತಿಭೆಗಳು ಹಾಗೂ ಆಟಗಳು ಇರುತ್ತವೆ. ಅವುಗಳನ್ನು ಹೊರಹಾಕಲು ಇಲ್ಲಿ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಈ ಕ್ರೀಡಾಕೂಟದಲ್ಲಿ ಕೆಲವು ತಂಡಗಳಿಗೆ ಗೆಲುವು ಸಿಗುತ್ತದೆ ಮತ್ತು ಕೆಲವು ತಂಡಗಳಿಗೆ ಸೋಲು ಸಿಗುತ್ತದೆ. ಸೋಲು ಗೆಲುವುಗಳನ್ನು ನಾವು ಸಮಾನವಾಗಿ ಸ್ವೀಕರಿಸಬೇಕು. ಇದಕ್ಕಿಂತ ಮುಖ್ಯವಾಗಿ ಭಾಗವಹಿಸುವಿಕೆ ತುಂಬಾ ಮುಖ್ಯ. ಆದ್ದರಿಂದ ನೀವೆಲ್ಲರೂ ಸಂತೋಷದಿಂದ ನಿಯಮಗಳನುಸಾರ ಆಟಗಳಲ್ಲಿ ಭಾಗವಹಿಸಬೇಕು. ಆಟಗಳಲ್ಲಿ ಯಾವುದೇ ತೊಂದರೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಕ್ರೀಡಾಪಟುಗಳನ್ನು ಹುರಿದುಂಬಿಸಿದರು.

      ಮುಂದುವರೆದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಅಧ್ಯಕ್ಷರಾದ ಸುರೇಶ ಶೇಡಶ್ಯಾಳ ರವರು ಮಾತನಾಡಿ, ಈ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ನಮಗೆ ಹಲವಾರು ಒತ್ತಡಗಳು ಹಾಗೂ ಗ್ರಾಮೀಣ ಮಟ್ಟದಲ್ಲಿ ಜನರಿಗೆ ಅನೇಕ ಸೇವೆಗಳನ್ನು ಒದಗಿಸುವಲ್ಲಿ ನಿಮ್ಮ ಪಾತ್ರ ಬಹು ಮುಖ್ಯ. ಕೆಲವರು ತಮ್ಮ ದೇಹ ಮತ್ತು ಮನಸ್ಸಿನ ಸದೃಢತೆ, ಆನಂದಕ್ಕಾಗಿ ನಿಯಮಿತವಾಗಿ ಆಡುತ್ತಾರೆ. ಆದರೆ, ಕೆಲವರು ತಮ್ಮ ಜೀವನದಲ್ಲಿ ಅಮೂಲ್ಯವಾದ ಸ್ಥಾನಮಾನವನ್ನು ಪಡೆಯಲು ಆಡುತ್ತಾರೆ. ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಅದರ ಮೌಲ್ಯವನ್ನು ನಿರ್ಲಕ್ಷಿಸಲಾಗುವುದಿಲ್ಲ. ಆದ್ದರಿಂದ ಎಲ್ಲರೂ ಹುಮ್ಮಸ್ಸಿನಿಂದ ಆಟಗಳನ್ನಾಡಬೇಕು ಎಂದರು.

      ಇದೇ ವೇಳೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಸಿ. ಜಿ. ಪಾರೆ ರವರು ಮಾತನಾಡಿ, ಒತ್ತಡವನ್ನು ಕಡಿಮೆ ಮಾಡಲು ಕ್ರೀಡೆಗಳಲ್ಲಿ ಭಾಗವಹಿಸುವುದು ಬಹಳ ಮುಖ್ಯ. ಒತ್ತಡವು ನಮ್ಮ ಮಾನಸಿಕ ಸಮತೋಲನವನ್ನು ಕಳೆದುಕೊಳ್ಳಲು ಕಾರಣವಾಗಬಹುದು. ಆದ್ದರಿಂದ ನಾವು ನಮ್ಮ ದೈನಂದಿನ ದಿನಚರಿಯಲ್ಲಿ ವಿವಿಧ ಆಟಗಳನ್ನು ಅಳವಡಿಸಿಕೊಂಡರೆ ಯಾವುದೇ ಒತ್ತಡವನ್ನು ನಿಭಾಯಿಸಬಹುದು. ಕ್ರೀಡೆ ನಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸಲು ತುಂಬಾ ಉಪಯುಕ್ತವಾಗಿದೆ. ನಮ್ಮ ಜೀವನವು ಕ್ರಮಬದ್ಧವಾಗಿ ನಡೆಯಲು ನಮ್ಮ ದೇಹ ಆರೋಗ್ಯವಾಗಿರುವುದು ಎಷ್ಟು ಮುಖ್ಯವೋ ಅದೇ ರೀತಿ ನಮ್ಮ ದೇಹದ ಸಂಪೂರ್ಣ ಬೆಳವಣಿಗೆಗೆ ಆಟಗಳೂ ಸಹ ಬಹಳ ಮುಖ್ಯ. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ನಮ್ಮ ದೇಹಕ್ಕೆ ಉತ್ತಮ ವ್ಯಾಯಾಮ ದೊರೆಯುತ್ತದೆ. ಮಕ್ಕಳು ಮತ್ತು ಯುವಕರ ಮಾನಸಿಕ ಮತ್ತು ದೈಹಿಕ ಬೆಳವಣಿಗೆಯಲ್ಲಿ ಇದು ಬಹಳ ಮುಖ್ಯವಾಗಿದೆ ಎಂದರು. ನಂತರ ಜಿಲ್ಲಾ ಪಂಚಾಯತಿಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಖುದ್ದಾಗಿ ಕ್ರೀಡಾಂಗಣಕ್ಕೆ ಆಗಮಿಸಿ, ಕ್ರಿಕೆಟ್ ಆಟದಲ್ಲಿ ಭಾಗವಹಿಸುವ ಮೂಲಕ ಕ್ರೀಡಾಪಟುಗಳನ್ನು ಹುರಿದುಂಬಿಸಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಯೋಜನಾ ನಿರ್ದೇಶಕರಾದ ಬಿ. ಎಸ್. ರಾಠೋಡ, ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಸಹಾಯಕ ಕಾರ್ಯದರ್ಶಿಗಳಾದ ಅನುಸೂಯಾ ಚಲವಾದಿ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ, ಪಂಚಾಯತ್ ರಾಜ್ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ನಬಿಲಾಲ ಗಬಸಾವಳಗಿ, ಗ್ರಾಮೀಣ ಮತ್ತು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಬಿ. ಎಸ್. ಕುಂಬಾರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಖಜಾಂಚಿ ಜುಬೇರ ಕೆರೂರ, ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಎ. ಬಿ. ಅಲ್ಲಾಪೂರ, ಸಹಾಯಕ ಯೋಜನಾಧಿಕಾರಿಗಳಾದ ಅರುಣಕುಮಾರ ದಳವಾಯಿ, ಜಿಲ್ಲಾ ಮಟ್ಟದ ಅಕ್ಷರ ದಾಸೋಹ ಶಾಖೆಯ ಶಿಕ್ಷಣಾಧಿಕಾರಿಗಳಾದ ಎಸ್. ಜೆ. ನಾಯಕ, ಜಿಲ್ಲೆಯ ಎಲ್ಲ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಸಹಾಯಕ ನಿರ್ದೇಶಕರು (ಗ್ರಾ.ಉ ಮತ್ತು ಪಂ.ರಾ) ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಆರ್.ಡಿ.ಪಿ.ಆರ್. ಇಲಾಖೆಯ ಎಲ್ಲ ವೃಂದ ಸಂಘಗಳ ಪದಾಧಿಕಾರಿಗಳು, ಜಿ.ಪಂ, ತಾ.ಪಂ, ಗ್ರಾಪಂ. ಗಳ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.

      Tags: #indi / vijayapur#On D-25-26 R.D.P.R. Proceedings for the opening ceremony of the Games-2024#Public News#Today News#Voiceofjanata.in#ಡಿ-25-26 ರಂದು ಆರ್.ಡಿ.ಪಿ.ಆರ್. ಕ್ರೀಡಾಕೂಟ-2024 ಉದ್ಘಾಟನಾ ಸಮಾರಂಭಕ್ಕೆ ಚಾಲನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      April 18, 2026
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.