ಸಚಿವ ಖರ್ಗೆ ಏಳಿಗೆ ಕಂಡು ಬಿಜೆಪಿಗೆ ಹೊಟ್ಟೆಕಿಚ್ಚು
ಕಮಲಾಪುರ : ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರು ಅಭಿವೃದ್ಧಿಪರ ಕೆಲಸಗಳಿಗೆ ಹೆಸರು ವಾಸಿಯಾಗಿದ್ದಾರೆ, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ವಿನಾಕಾರಣ ಅವರ ರಾಜೀನಾಮೆ ಕೇಳುತ್ತಿರುವುದು ಖಂಡನೀಯವಾಗಿದೆ, ಅವರ ಏಳಿಗೆ ಕಂಡು ಬಿಜೆಪಿ ಪಕ್ಷ ಹೊಟ್ಟೆ ಕಿಚ್ಚುಪಡುತ್ತಿದೆ ಎಂದು ಕಮಲಾಪುರ ಕಾಂಗ್ರೆಸ್ ಮುಖಂಡ ಗುರು ಮಾಟೂರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬುದ್ಧ ಬಸವ ಅಂಬೇಡ್ಕರ್ ಅವರ ತತ್ವಗಳನ್ನು ಅಳವಡಿಸಿಕೊಂಡು ಸರ್ವರಿಗೂ ಸಮಬಾಳು ಸಮಪಾಲು ಕಲ್ಪಿಸುವ ನಿಟ್ಟಿನಲ್ಲಿ ಖರ್ಗೆ ಕುಟುಂಬ ಕಲಬುರ್ಗಿಯಲ್ಲಿ ಕೆಲಸ ಮಾಡುತ್ತಿದೆ.
ಸಚಿವ ಪ್ರಿಯಾಂಕ ಖರ್ಗೆ ಅವರ ಅಭಿವೃದ್ಧಿ ಕೆಲಸಗಳು ಹಾಗೂ ಜನಪ್ರಿಯತೆ ಕಂಡು ಹೊಟ್ಟೆಕಿಚ್ಚು ಪಡುತ್ತಿದ್ದಾರೆ, ಅವರ ಏಳಿಗೆ ಸಹಿಸದೆ ಇಲ್ಲ ಸಲ್ಲದ ಆರೋಪಗಳು ಮಾಡುತ್ತಿದ್ದಾರೆ,
ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್ ನೋಟ್ ನಲ್ಲಿ ಸಚಿವರ ಪಾತ್ರದ ಕುರಿತು ಉಲ್ಲೇಖವಾಗಿಲ್ಲ ರಾಜೀನಾಮೆ ಕೇಳುತ್ತಿರುವ ಬಿಜೆಪಿಗರು ಈ ಕುರಿತು ದಾಖಲೆಗಳಿದ್ದರೆ ಬಹಿರಂಗಪಡಿಸಲಿ ಎಂದು ಸವಾಲ್ ಹಾಕಿದ್ದಾರೆ.