ಇಂಡಿ :ಕಂದಾಯ ಇಲಾಖೆ ಆರಂಭಿಸಿರುವ ಪಿಂಚಣಿ ಅದಾಲತ್ ಯೋಜನೆ ಬಡವರಿಗೆ ಅನುಕೂಲವಾಗಿದೆ. ಜನರನ್ನು ಅಲೆದಾಡಿಸುವ ಬದಲು ಸ್ಥಳದಲ್ಲೇ ಪರಿಹಾರ ಸೂಚಿಸಲಾಗುವುದು. ಸಾರ್ವಜನಿಕರು ಇದನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಇಂಡಿ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಹೇಳಿದರು.
ನೂತನ ಚಡಚಣ ತಾಲ್ಲೂಕಿನ ಶಿಗಣಾಪೂರ ಗ್ರಾಮದಲ್ಲಿ ಕಂದಾಯ ಇಲಾಖೆಯಿಂದ ಆಯೋಜಿಸಿರುವ ಪಿಂಚಣಿ ಅದಾಲತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸವಲತ್ತುಗಳು ತಲುಪಬೇಕು. ಈ ನಿಟ್ಟಿನಲ್ಲಿ ಜವಾಬ್ದಾರಿಯುತ ಪ್ರತಿಯೊಬ್ಬರು ಕೈ ಜೋಡಿಸಿಯೋಜನೆಗಳ ಸಾಕಾರಕ್ಕೆ ಮುಂದಾಗಬೇಕು. ಕಂದಾಯ ಇಲಾಖೆಯಿಂದ ಅಂಗವಿಕಲ, ವಿಧವಾ, ಸಂಧ್ಯಾ ಸುರಕ್ಷಾ ವೇತನ ಮುಂತಾದ ಹಲವು ಪಿಂಚಣಿ ಯೋಜನೆ ಅರ್ಹರಿಗೆ ತಲುಪಿಸಬೇಕು ಎಂದು ಹೇಳಿದರು. ಹೋಬಳಿ ಮಟ್ಟದ ಪಿಂಚಣಿ ಅದಾಲತ್‌ನಲ್ಲಿ ಸ್ಥಳೀಯ ಹಾಗೂ ಸುತ್ತಲಿನ ಗ್ರಾಮೀಣ ಪ್ರದೇಶದ ಹಲವಾರು ಅರ್ಹ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಮಂಜೂರಾತಿ ಪತ್ರಗಳನ್ನು ಅಧಿಕಾರಿಗಳು ವಿತರಿಸಿದರು.
ಈ ಸಂದರ್ಭದಲ್ಲಿ ಗ್ರೇಡ್ 2 ತಹಶಿಲ್ದಾರ ಆರ್ ಎಸ್ ಚವ್ಹಾಣ, ಕಂದಾಯ ನಿರೀಕ್ಷಕ ಪಿ ಜೆ ಕೊಡಹೊನ್ನ, ಪಿಡಿಒ ಶ್ರೀ ಭೀಮಾಶಂಕರ ಕುಂಬಾರ, ಗ್ರಾಮ ಆಡಳಿತ ಅಧಿಕಾರಿ ಶಂಕರ್ ಕಲಕೇರಿ, ಕಂಪ್ಯೂಟರ್ ಆಪರೇಟರ್ ವಾಣಿ ಪಾಟೀಲ್, ಎಸ್ ಎಮ್ ಕೋಳಿ, ಸಿದ್ದು ಕೋಳಿ, ದುಂಡು ಕೋಳಿ ಸಿಬ್ಬಂದಿ ವರ್ಗ ಹಾಗೂ ಗ್ರಾ.ಪಂ ಸದಸ್ಯರು ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.