ಭೀಮಾತೀರದಲ್ಲಿ ರಕ್ತದೋಕುಳಿ : ಬಾಗಪ್ಪ ಹರಿಜನ ಕೊಚ್ಚಿ ಕೊಲೆ..!
Voice Of Janata : ವಿಜಯಪುರ : ಭೀಮಾತೀರದ ಹಂತಕ ಬಾಗಪ್ಪ ಹರಿಜನ್ನನ್ನುದುಷ್ಕರ್ಮಿಗಳ ಗುಂಪೊಂದು ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ರೇಡಿಯೋ ಕೇಂದ್ರ ಬಳಿ ಇರುವ ಮದಿನಾ ನಗರದಲ್ಲಿ ನಡೆದಿದೆ.
ಭೀಮಾತೀರದ ನಟೋರಿಯಶ್ ಹಂತಕ ಚಂದಪ್ಪ ಹರಿಜನ್ ಶಿಷ್ಯ ಬಾಗಪ್ಪ ಹರಿಜನ್. ಕಲಬುರ್ಗಿ, ವಿಜಯಪುರದ ಭೀಮಾತೀರದಲ್ಲಿ ಹೆಚ್ಚು ಕುಖ್ಯಾತಿ ಪಡೆದಿದ್ದ ಭಾಗಪ್ಪ.
ಈ ಹಿಂದೆ ಕೋರ್ಟ್ ಆವರಣದಲ್ಲಿ ಭಾಗಪ್ಪನ ಮೇಲೆ ದಾಳಿ ನಡೆದಿತ್ತು. ಇದೀಗ ದುಷ್ಕರ್ಮಿಗಳ ಗುಂಪು ಆತನ ಮನೆ ಮುಂದೆಯೇ ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಪರಿಶೀಲನೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ತಂಡವನ್ನು ರಚಿಸಿದ್ದಾರೆ.
ಸದ್ಯ ಘಟನೆ ಸ್ಥಳಕ್ಕೆ ಡಾಗ್ ಸ್ಕ್ವಾಡ್, ವಿಧಿ ವಿಜ್ಞಾನ ವಿಭಾಗದ ತಜ್ಞರ ಭೇಟಿ ನೀಡಿದ್ದಾರೆ. ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ್ ಮಾರಿಹಾಳ, ಎಎಸ್ಪಿ ರಾಮನಗೌಡ ಹಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.