ದೆಹಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅಧಿಕಾರ ಸ್ವೀಕಾರ
Voice of Janata DeSK NEWS :ನವದೆಹಲಿ: ಸಾವಿರಾರು ಜನರ ಹರ್ಷೋದ್ಘಾರ ಮುಗಿಲು ಮುಟ್ಟಿದ ಸಂಭ್ರಮಾಚಾರಣೆಯ ನಡುವೆಯೇ ರಾಷ್ಟ್ರ ರಾಜಧಾನಿ ನವದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಶಾಸಕಿಯಾಗಿ ಆಯ್ಕೆಯಾಗಿರುವ ರೇಖಾ ಗುಪ್ತ ಅವರು ಮುಖ್ಯಮಂತ್ರಿಯಾಗಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಈ ಮೂಲಕ 27 ವರ್ಷಗಳ ನಂತರ ದೆಹಲಿಯಲ್ಲಿ ಸ್ವಂತಬಲದ ಮೇಲೆ ಅಧಿಕಾರ ಗದ್ದುಗೆ ಹಿಡಿಯುವ ಬಹು ದಿನಗಳ ಕನಸು ಕೊನೆಗೂ ನನಸಾಗಿದೆ. 32 ವರ್ಷಗಳ ವಿಧಾನಸಭಾ ಇತಿಹಾಸದಲ್ಲಿ ಮುಖ್ಯಮಂತ್ರಿಯಾಗುತ್ತಿರುವ 4ನೇ ಮಹಿಳೆ ಅವರು. ಬಿಜೆಪಿಯ ಸುಷಾ ಸ್ವರಾಜ್, ಕಾಂಗ್ರೆಸ್ನ ಶೀಲಾ ದೀಕ್ಷಿತ್ ಹಾಗೂ ಎಎಪಿಯ ಆತಿಶಿ ಅವರು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದರು.
ಇದೇ ವೇಳೆ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರವಾಲ್ ಅವರನ್ನು ಸೋಲಿಸಿದ್ದ ಪರ್ವೇಶ್ ವರ್ಮಾ ಅವರು ಉಪ ಮುಖ್ಯಮಂತ್ರಿಯಾಗಿ ಹಾಗೂ ಬಿಜೆಪಿ ಶಾಸಕರಾದ ಆಶಿಶ್ ಸೂದ್, ಮಂಜಿಂದರ್ ಸಿಂಗ್ ಸಿಸಾರ್, ರವೀಂದರ್ ಇಂದ್ರಜ್, ಕಪಿಲ್ ಮಿಶ್ರಾ ಮತ್ತು ಪಂಕಜ್ ಕುಮಾರ್ ಸಿಂಗ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.