ಮಾ.1ರಿಂದ 20ರವರೆಗೆ ದ್ವೀತಿಯ ಪಿಯುಸಿ ವಾರ್ಷಿಕ ಪರೀಕ್ಷೆ
ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ
ವಿಜಯಪುರ: ದ್ವೀತಿಯ ಪಿಯು ವಾರ್ಷಿಕ ಪರೀಕ್ಷೆಗಳು ಇದೇ ಮಾ. 1ರಿಂದ 20ರವರೆಗೆ ಜಿಲ್ಲೆಯ 63 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಸುವ್ಯವಸ್ಥಿತ ಪರೀಕ್ಷೆಗಾಗಿ ಹಾಗೂ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಕಲಂ 163ರನ್ವಯ ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಟಿ ಭೂಬಾಲನ್ ಆದೇಶ ಹೋರಡಿಸಿದ್ದಾರೆ.
ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಇತರರು ಮೊಬೈಲ್ ಫೋನನ್ನು ತರುವುದು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಷ ಅಂಗಡಿಗಳು,
ಕಂಪ್ಯೂಟರ ಸೆಂಟರ್‌ಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಪರೀಕ್ಷಾ ತೆರೆಯದಂತೆ ಆದೇಶಿಸಲಾಗಿದೆ. ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಪುಸ್ತಕಗಳು, ಗೆಜೆಟ್‌ಗಳನ್ನು, ಮೊಬೈಲ್ ಪೋನ್, ಡಿಜಿಟಲ್ ವಾಚ್ ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ
ಹಾಗೂ ಈ ಬಾರಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಇರಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ನಿರಂತರ ವಿದ್ಯುತ್ ಸಂಪರ್ಕ ವ್ಯವಸ್ಥೆ, ಇಂಟರ್ ಒಳದ ನೆಟ್, ಸೂಕ್ತ ಗಾಳಿ-ಬೆಳಕಿನ ವ್ಯವಸ್ಥೆಯನ್ನು ಪುರ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಪುರ ಮಾಡಿಕೊಳ್ಳಬೇಕು. ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ವಿದ್ಯಾರ್ಥಿಗಳು ಸರದ ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಕಾಲಾ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ 01ರ ತಿಳಿಸಿದ್ದಾರೆ.