ಮಾದಪ್ಪನ ಸನ್ನಿಧಿಯಲ್ಲಿ ವಿಜೃಂಭಣೆಯಿಂದ ಜರುಗಿದ ಮಹಾ ರಥೋತ್ಸವ
ವರದಿ:ಚೇತನ್ ಕುಮಾರ್ ಎಲ್,ಚಾಮರಾಜನಗರ
ಹನೂರು:ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಅಂಗವಾಗಿ ಮಹಾರಥೋತ್ಸವಕ್ಕೆ ಸಾಲೂರು ಬೃಹನ್ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶಾಂತ ಮಲ್ಲಿಕಾರ್ಜುನಸ್ವಾಮಿ ಗಳು ಹಾಗೂ ಶಾಸಕ ಎಂ.ಆರ್ ಮಂಜುನಾಥ್ ಚಾಲನೆ ನೀಡಿದರು.
ಮಹಾರಥವನ್ನು ವಿವಿಧ ಪುಷ್ಪಗಳಿಂದ ಸಿಂಗಾರ ಮಾಡಲಾಗಿತ್ತು, ದೇಗುಲವನ್ನು ತಳಿರು ತೋರಣದಿಂದ ಸಿಂಗಾರ ಮಾಡಲಾಗಿತ್ತು. ಬೆಳಗಿನ ಜಾವ ಗಂಟೆಯಿಂದ 6.30ರವರೆಗೆ ಸ್ವಾಮಿಗೆ ಪ್ರಥಮ ಹಾಗೂ ದ್ವಿತೀಯ ವಿಶೇಷ ಪೂಜೆ ನೆರವೇರಿನ ಲಾಯಿತು. ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಬೆಳಗಿನ ಜಾವ ಪ್ರಥಮ ಹಾಗೂ ದ್ವಿತೀಯ ವಿಶೇಷ ಪೂಜೆ ನೆರವೇರಿಸಲಾಯಿತು. ಉಪವಾಸವಿದ್ದ ಬೇಡಗಂಪಣ ಸರದಿ ಅರ್ಚಕರು ಛತ್ರಿ, ಚಾಮರ, ವಾದ್ಯ ಮೇಳದೊಂದಿಗೆ ದೇಗುಲ ಪ್ರದಕ್ಷಿಣೆ ಹಾಕಿ ವಿಶೇಷ ಪೂಜೆಯನ್ನು ಸಲ್ಲಿಸಿ ಮೆರವಣಿಗೆಯ ಮೂಲಕ ಉತ್ಸವ ಮೂರ್ತಿಯನ್ನು ಮಹಾರಥೋತ್ಸವವಕ್ಕೆ ತರಲಾಯಿತು . ಸ್ವಾಮಿಗೆ ಸಂಕಲ್ಪಮಾಡಿ, ಅಷ್ಟೋತ್ತರ. ಬಿಲ್ವಾರ್ಚನೆ, ದೋಪ ದೀಪ ನೈವೇದ್ಯ ಮಹಾಮಂಗಳಾರತಿ ನೆರವೇರಿಸಿದರು. ಈ ವೇಳೆ ಭಕ್ತರು ಉಘೇ ಉಘೇ ಮಹಂತ ಮಲ್ಲಯ್ಯಾ, ಉಘೇ ಮಾದಪ್ಪ ಉಘೇ, ಸಾಲೂರುಮಠದೊಡೆನಿಗೆ ಉಘೇ ಉಘೇ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿದರು. ಭಕ್ತಿ ಭಾವದ ಸಂಗಮದಲ್ಲಿ ಭಕ್ತರು ಮುಳುಗಿದರು.
ಶಾಸಕ ಎಂಆರ್ ಮಂಜುನಾಥ್ ಮಾತನಾಡಿ ಸಾಲೂರು ಶ್ರೀಗಳ ಆಶೀರ್ವಾದ ಹಾಗೂ ಮಾರ್ಗದರ್ಶನದೊಂದಿಗೆ ಪ್ರಾಧಿಕಾರ ಹಾಗು ಜಿಲ್ಲಾಡಳಿತ, ಪೊಲೀಸ್ ಇಲಾಖೆಯ ಸಹಕಾರದಿಂದ ಶಿವರಾತ್ರಿ ಮಹೋತ್ಸವ ಯಶಸ್ವಿಯಾಗಿದೆ. ಮಾದಪ್ಪ ನಾಡಿನ ಸಮಸ್ತ ಜನರಿಗೆ ಸುಖ ಶಾಂತಿ ನೆಮ್ಮದಿಯನ್ನು ಕರುಣಿಸಲಿ ಎಂದು ಹಾರೈಸಿದರು.
ಇದೆ ಸಂದರ್ಭದಲ್ಲಿ ಸಾಲೂರು ಮಠದ ಸ್ವಾಮಿಗಳ ಶಾಂತಮಲ್ಲಿಕಾರ್ಜುನ ಸ್ವಾಮಿ,ಪ್ರಾಧಿಕಾರದ ಕಾರ್ಯದರ್ಶಿ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಡಿವೈಎಸ್ಪಿ ಧಮೇಂದ್ರ,ಮುಖಂಡರುಗಳಾದ ಮಂಜೆಶ್ ಗೌಡ,ಡಿ ಆರ್ ಮಾದೇಶ್,ರಾಜೂಗೌಡ,ಚಿನ್ನ ವೆಂಕಟ್, ಡಿ.ಕೆ ರಾಜು,ಸುರೇಶ್,ವಿಜಯ್ ಕುಮಾರ್ ,ಮದುವನಹಳ್ಳಿ ನಿಂಗರಾಜು,ವೆಂಕಟೇಶ್,ಹಾಗೂ ಇನ್ನಿತರರು ಉಪಸ್ಥಿತರಿದ್ದರು.


















