ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ..!
ಇಂಡಿ : ಓರ್ವ ಮಹಿಳೆ ನಮ್ಮ ದೇಶದಲ್ಲಿ ಪ್ರಧಾನಿಯಾಗಿ ಆಡಳಿತ ಮಾಡುವ ಮೂಲಕ ಮಹಿಳಾ ಸಾಮರ್ಥ್ಯ ಬಗ್ಗೆ ಎಲ್ಲರಿಗೂ ಗೊತ್ತಿದೆ. ಅದರಂತೆ ವಿಧ್ಯಾರ್ಥಿಗಳು ತಮ್ಮ ಗುರಿಯತ್ತ ಸಾಗಬೇಕಾದರೆ ಶಿಸ್ತು ಬಹಳ ಮುಖ್ಯ, ಶಿಸ್ತನ್ನು ಮೈಗೂಡಿಸಿಕೊಂಡು ಚೆನ್ನಾಗಿ ಓದಿ ವಿದ್ಯಾವಂತರಾಗಿ ಪ್ರಧಾನಿ ಇಂದಿರಾಗಾಂಧಿ ಹಾಗೂ ಐಐಎಸ್, ಐಪಿಎಸ್ ಅಂತಹ ದೊಡ್ಡ ದೊಡ್ಡ ಸ್ಥಾನಗಳನ್ನು ಅಲಂಕರಿಸಬೇಕು ಎಂದು ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಶಿವಯೋಗೆಪ್ಪ ನೆದಲಗಿ ಹೇಳಿದರು.
ಸೋಮವಾರ ತಾಲ್ಲೂಕಿನ ಸಾಲೋಟಗಿ ಗ್ರಾಮದಲ್ಲಿ ಸರಕಾರಿ ಗಂಡು ಮತ್ತು ಹೆಣ್ಣು ಮಕ್ಕಳು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ. ನಾಗರಾಜ ಗೌರಬಿದರನೂರ ರಾಷ್ಟ್ರೀಯ ಸಾಕ್ಷರತಾ ಮಿಷನ್ ಸಂಯೋಜಕರು, ಭಾರತ ಸರಕಾರ ಯೋಜನೆ ಅಡಿಯಲ್ಲಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜೀವನದಲ್ಲಿ ಎಲ್ಲರೂ ಕಷ್ಟಪಟ್ಟು ಓದಿ ಮುಂದೆ ಬರಬೇಕು. ನೀವು ದೇಶದ ಉತ್ತಮ ಪ್ರಜೆಯಾಗಿ ದೇಶಕ್ಕೆ ನಿಮ್ಮದೇ ಆದ ಕೊಡುಗೆ ನೀಡಬೇಕು ಎಂದು ಹೇಳಿದರು. ಒಟ್ಟು ತಾಲ್ಲೂಕಿಗೆ 7 ಸಾವಿರ ಬ್ಯಾಗ ಬಂದಿದ್ದು, ಅದರಲ್ಲಿ ಸಾಲೋಟಗಿ ಗ್ರಾಮದಲ್ಲಿ 1 ಸಾವಿರ ಬ್ಯಾಗ ಹಂಚುವ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಅದರಂತೆ ಮಕ್ಕಳು ಬ್ಯಾಗಗಳನ್ನು ಪಡೆದು ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಯುವ ಮುಖಂಡ ಚಿದಾನಂದ ಉಪ್ಪಾರ, ಭೀಮರಾಯ ಉಪ್ಪಾರ, ಮಾದೇವ, ರಾಜಾಹುಲಿ ಶಿವು ಉಪ್ಪಾರ ಹಾಗೂ ಗ್ರಾ. ಪಂ ಅಧ್ಯಕ್ಷ ,ಉಪಾಧ್ಯಕ್ಷ ಸೇರಿದಂತೆ ಶಾಲೆಯ ಮುಖ್ಯ ಗುರುಗುಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.