ಕಮಲಾಪುರ ಅಲ್ಪಸಂಖ್ಯಾತ ತಾಲೂಕು ಅಧ್ಯಕ್ಷರಾಗಿ ತಾಜೋದ್ದಿನ್ ಪಟೇಲ್
ಕಮಲಾಪುರ: ತಾಲೂಕಿನ ಅಂಬಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಯುವ ಕಾಂಗ್ರೆಸ್ ಮುಖಂಡರಾದ ತಾಜೋದ್ದಿನ್ ಪಟೇಲ್ ಅವರನ್ನು
ಕಾಂಗ್ರೆಸ್ ಅಲ್ಪಸಂಖ್ಯಾತರ ಇಲಾಖೆಯ ಕಮಲಾಪುರ ತಾಲೂಕಿನ ಅಧ್ಯಕ್ಷರಾಗಿ ನೇಮಕ ಮಾಡಿ ಜಿಲ್ಲಾ ಅಧ್ಯಕ್ಷ ನಯಿಮ್ ಖಾನ್ ಆದೇಶ ಹೊರಡಿಸಿದ್ದಾರೆ.
ನಿರಂತರವಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿ ಶ್ರಮಿಸಿದ ಇವರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ವಷ೯ದಲ್ಲೇ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದೆ,
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಡಾಕ್ಟರ್ ಮಲ್ಲಿಕಾರ್ಜುನ್ ಖರ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಜಿಲ್ಲ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ , ಕಲಬುರ್ಗಿ ಉತ್ತರ ಶಾಸಕಿ ಖನಿಜ ಫಾತಿಮಾ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಜಗದೇವ ಗುತ್ತೇದಾರ್, ಮಾಜಿ ಸಚಿವ ರೇವು ನಾಯಕ್, ಬೆಳಮಗಿ ಹಾಗೂ ಇತರ ಕಾಂಗ್ರೆಸ್ ವರಿಷ್ಠರ ಆದೇಶದಂತೆ ಕೂಡಲೇ ಪಕ್ಷ ಸಂಘಟನೆಯಲ್ಲಿ ತೊಡಗಿ ಕಮಲಾಪುರ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಲು ಸೂಚನೆ ನೀಡಲಾಗಿದೆ.