ಲಿಂಗಸೂಗೂರು: ನಿನ್ನೆ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳ ಪೊಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನಲೆ ಇಂದು ಹಿಜಬ್ ಧರಿಸಿ ಬಂದ ವಿಧ್ಯಾರ್ಥಿನಿಯರು ಕಾಲೇಜು ಪ್ರವೇಶಕ್ಕೆ ಒಪ್ಪಿಗೆ ನೀಡದ ಶಾಲಾ ಆಡಳಿತ ಮಂಡಳಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಹಳೆ ಬಸ್ ನಿಲ್ದಾಣದ ಬಳಿ ಇರುವಂತಹ ಬಸವೇಶ್ವರ ಪದವಿ ಕಾಲೇಜಿನಲ್ಲಿ ಗೊಂದಲ ಹುಟ್ಟಿಕೊಂಡಿದೆ. ನಿನ್ನೆ ಕೇಸರಿ ಶಾಲು ಹಾಕಿಕೊಂಡ ಬಂದು ವಿದ್ಯಾರ್ಥಿಗಳು ತರಗತಿ ಕುಳಿತುಕೊಂಡಿದ್ದರು ಎನ್ನಲಾಗುತ್ತಿದೆ, ಆದರೆ ಇಂದು ಹಿಜಬ್ ಧರಿಸಿ ಬಂದಂತಹ ವಿದ್ಯಾರ್ಥಿನಿಯರಿಗೆ ಶಾಲಾ ಆಡಳಿತ ಮಂಡಳಿ ಒಪ್ಪಿಗೆ ನೀಡುತ್ತಿಲ್ಲ. ಇದರಿಂದ ಅಸಮಾಧಾನಗೊಂಡ ವಿದ್ಯಾರ್ಥಿನಿಯರು ಘಟನೆ ಖಂಡಿಸಿ ಶಾಲೆ ಬಂದ್ ಮಾಡುವಂತೆ ಒತ್ತಾಯ ಮಾಡಿದ್ದಾರೆ. ಇತ್ತ ಕಾಲೇಜು ಆಡಳಿತ ಮಂಡಳಿಯವರು ವಿದ್ಯಾರ್ಥಿನಿಯರ ಮನವೊಲಿಸಿ ತರಗತಿಗಳಿಗೆ ಕಳಿಸಿದ್ದಾರೆ ಎನ್ನಲಾಗುತ್ತಿದೆ.