2025 SSLC Result ಬಿಡುಗಡೆ ಯಾವಾಗ..? ಫಲಿತಾಂಶ ನೋಡುವುದು ಹೇಗೆ..?
Voice of Janata DESK NEWS : ಎಸ್ ಎಸ್ ಎಲ್ ಸಿ ಫಲಿತಾಂಶ Results 2025 ಬಿಡುಗಡೆ ಯಾವಾಗ, ದಿನಾಂಕ, ವೆಬ್‌ಸೈಟ್ ಮಾಹಿತಿ, ಫಲಿತಾಂಶ ನೋಡುವುದು/ಡೌನ್‌ಲೋಡ್ ಹೇಗೆ? ಎಂಬ ಪೂರ್ತಿ ವಿವರ ಇಲ್ಲಿದೆ.
ಕರ್ನಾಟಕ ರಾಜ್ಯದಲ್ಲಿ ಪ್ರಸಕ್ತ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿತ್ತು. ಕಳೆದ ಮಾರ್ಚ್ 21 ರಿಂದ ಏಪ್ರಿಲ್ 4ರವರೆಗೆ ಸುಸೂತ್ರವಾಗಿ ಪರೀಕ್ಷೆಗಳು ನಡೆದಿದ್ದು, ಇದೀಗ ವಿದ್ಯಾರ್ಥಿಗಳು ಹಾಗೂ ಪೋಷಕರು SSLC ಫಲಿತಾಂಶದತ್ತ ಗಮನ ಹರಿಸಿದ್ದಾರೆ.
ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯು ಜನವರಿ 10ರಂದು SSLC ಪರೀಕ್ಷಾ 2025 ವೇಳಾಪಟ್ಟಿ ಬಿಡುಗಡೆ ಮಾಡಿತ್ತು. ಅಂತಿಮ ಮತ್ತು ಅಧಿಕೃತ ವೇಳಾಪಟ್ಟಿಯನ್ನು ಮಂಡಳಿಯು ತನ್ನ ವೆಬ್‌ಸೈಟ್ ನಲ್ಲಿ ಪ್ರಕಟಿಸಿತ್ತು. ತದನಂತರ SSLC ವಿದ್ಯಾರ್ಥಿಗಳಿಗೆ ಪ್ರವೇಶ ಕಾರ್ಡ್ ಅನ್ನು KSEAB ವಿತರಿಸಿತ್ತು. ಅದರಂತೆ ಪರೀಕ್ಷೆಗಳು ನಿಗದಿತ ಕಾಲಮಿತಿಯಲ್ಲಿ ನಡೆದಿದ್ದು, ಒಟ್ಟು ಸುಮಾರು 08 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅಂತಿಮ ಪ್ರಕ್ರಿಯೆಯಾದ ಫಲಿತಾಂಶ ಬಿಡುಗಡೆಯ ದಿನಕ್ಕಾಗಿ ಕಾಯಲಾಗುತ್ತಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಮೂಲಗಳ ಪ್ರಕಾರ ಇದೇ ಏಪ್ರಿಲ್ ತಿಂಗಳ ಅಂತ್ಯಕ್ಕೆ ಹಾಗೂ ಮೇ ಮೊದಲ ವಾರ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂಬ ಮಾಹಿತಿ ಇತ್ತು. ಆದರೆ ಈ ಸದ್ಯ ಮೌಲ್ಯಮಾಪನ ಮಂಡಳಿಯೇ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ karresults.nic.in ಮೇ ತಿಂಗಳ ಮೊದಲ ವಾರ ಬಿಡುಗಡೆ ಮಾಡಲಿದೆ ಎಂದು ಮಾಹಿತಿ ಇದ್ದು, ವಿದ್ಯಾರ್ಥಿಗಳು ಫಲಿತಾಂಶ ನಿರೀಕ್ಷಿಸಬಹುದಾಗಿದೆ.