ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ನಿಧನ
-
ಪಶ್ಚಿಮ ಘಟ್ಟ ಅಧ್ಯಯನ ಸಮಿತಿಗೆ ನೇತೃತ್ವ ವಹಿಸಿದ್ದ ಕಸ್ತೂರಿ ರಂಗನ್
-
ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂ ಷಣ ಪುರಸ್ಕಾರ ಭಾಜನರಾಗಿದ್ದರು
-
ಪಿಎಸ್‌ಎಲ್‌ವಿ ಯೋಜನೆ ಅಭಿವೃದ್ಧಿಯಲ್ಲಿ ಮುಖ್ಯ ಪಾತ್ರ
Voiceofajanata.in : DESK NEWS :
ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ (84) ವಯೋಸಹಜ ಅನಾರೋಗ್ಯ ದಿಂದ ಶುಕ್ರವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ನಿಧರಾದರು. ಮೃತರಿಗೆ ಇಬ್ಬರು ಪುತ್ರರಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಭಾನುವಾರ ಬೆಳಗ್ಗೆ 10 ಗಂಟೆಯಿಂದ 12 ಗಂಟೆವರೆಗೆ ಸದಾಶಿವನಗರದ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗು ತ್ತದೆ ಎಂದು ಮೂಲಗಳು ತಿಳಿಸಿವೆ.
ಬಾಹ್ಯಾಕಾಶ ವಿಜ್ಞಾನಿಯಾಗಿದ್ದ ಕೃಷ್ಣಸ್ವಾಮಿ ಕಸ್ತೂರಿ ರಂಗನ್, ಬಾಹ್ಯಾಕಾ ಕ್ಷೇತ್ರವಲ್ಲದೇ ರಾಜಕೀಯ, ಶಿಕ್ಷಣ, ಪರಿಸರ ಸೇರಿದಂತೆ ಬೇರೆ ಬೇರೆ ಕ್ಷೇತ್ರಗಳಲ್ಲೂ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿದ್ದರು. ಕಸ್ತೂರಿ ರಂಗನ್ ಅವರು, 1994 ರಿಂದ 2003ರ ವರೆಗೆ ಇಸ್ರೋದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಕೇಂದ್ರ ಸರಕಾರದ ಬಾಹ್ಯಾಕಾಶ ಇಲಾಖೆ ಕಾರ್ಯ ದರ್ಶಿಯಾಗಿಯೂ ಕೆಲಸ ಮಾಡಿದ್ದಾರೆ. ಪಿಎಸ್‌ಎಲ್‌ವಿ ಯೋಜನೆ ಅಭಿವೃದ್ಧಿಯಲ್ಲಿ ಮುಖ್ಯ ಪಾತ್ರವಹಿಸಿದ್ದ ಅವರು, ಭಾರತದ ಮೊದಲ ಭೂ ವೀಕ್ಷಣಾ ಉಪಗ್ರಹಗಳಾದ ‘ಭಾಸ್ಕರ್ ಐ’ ಮತ್ತು ‘ಭಾಸ್ಕರ್ ಐಐ’ ಉಪ ಗ್ರಹಗಳ ತಯಾರಿಕೆಯಲ್ಲಿ ಯೋಜನಾ ನಿರ್ದೇಶಕರಾಗಿ ಕೆಲಸ ಮಾಡಿದ್ದರು..
2003-2009 ರವೆರೆಗೆ ರಾಜ್ಯ ಸಭಾ ಸದಸ್ಯ ರಾಗಿ ಸೇವೆ ಸಲ್ಲಿಸಿರುವ ಅವರು, ನಂತರ ಬೆಂಗ ಳೂರಿನ ನ್ಯಾಷನಲ್ ಇನ್ಸಿಟ್ಯೂಟ್ ಆಫ್ಅಡ್ವಾನ್ಸ್ ಸ್ಟಡೀಸ್ ಸಂಸ್ಥೆ ನಿರ್ದೇಶಕರಾಗಿ ದರು. ನಂತರ ಯೋಜನಾ ಆಯೋಗದಲ್ಲಿ ವಿಜ್ಞಾನದ ವಿಭಾಗದ ಸದಸ್ಯರಾಗಿದ್ದರು. ಎನ್ ಇಪಿ ಕರಡು ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಎನ್‌ಇಪಿಯಲ್ಲಿನ ಶಿಕ್ಷಣ ಸುಧಾ ರಣೆಗಳ ಹಿಂದಿನ ವ್ಯಕ್ತಿ ಎಂದೇ ಕಸ್ತೂರಿ ರಂಗನ್ ಖ್ಯಾತರಾಗಿದ್ದಾರೆ. 1982ರಲ್ಲಿ ಪದ್ಮಶ್ರೀ, 1992 ರಲ್ಲಿ ಪದ್ಮಭೂಷಣ, 2000 ರಲ್ಲಿ ಪದ್ಮ ವಿಭೂಷಣ ಪುರಸ್ಕಾರಕ್ಕೆ ಭಾಜನರಾಗಿದ್ದರು.