2025 ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಣೆ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶುಕ್ರವಾರ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ- 1 ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಳಗ್ಗೆ 11:30ಕ್ಕೆ ಬೆಂಗಳೂರಿನ KSEAB ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಎಸ್‌ಎಸ್ ಎಲ್‌ಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕದಾದ್ಯಂತ
2,818 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿತ್ತು. ಒಟ್ಟು ಸುಮಾರು 8.96 ಲಕ್ಷ ವಿದ್ಯಾರ್ಥಿಗಳು, 4,61,563 ಬಾಲಕರು 4,34,884 ಪರೀಕ್ಷೆ ಬರೆದಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಥವಾ 10 ನೇ ತರಗತಿಯ ಬೋರ್ಡ್ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://kseab.karnataka.gov.in karresults.nic.in ನಲ್ಲಿ ಪ್ರಕಟಿಸಲಿದೆ.


















