ಸಿಡಿಲು ಬಡಿದು ರೈತ ಮಲ್ಲಪ್ಪ ಸಾವು
ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ: ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಾಯಂಕಾಲ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ತಂಗಡಗಿ ಗ್ರಾಮದ ರೈತ ಮಲ್ಲಪ್ಪ ಗುರುಶಾಂತಪ್ಪ ತಾಳಿಕೋಟಿ (47) ಸಂಜೆ ಹೊಲಕ್ಕೆ ಕೆಲಸಕ್ಕೆ ಹೋಗಿದ್ದಾಗ ಏಕಾಏಕಿ ಗುಡುಗು ಮಿಶ್ರಿತ ಸಿಡಿಲಿಗೆ ಬಲಿಯಾಗಿದ್ದಾನೆ.
ಮೃತ ರೈತನಿಗೆ ಪತ್ನಿ, ಇಬ್ಬರು ಪುತ್ರರು ಇದ್ದು ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಗ್ರಾಮ ಆಡಳಿತ ಅಧಿಕಾರಿ ಎಚ್ ಬಿ ಕೊರಬು ಭೇಟಿ ನೀಡಿದ್ದಾರೆ. ಮುದ್ದೇಬಿಹಾಳ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.