ಭಯೋತ್ಪಾಧನಾ ವಿರೋಧಿ ದಿನ ಆಚರಣೆ : ಜಿಲ್ಲಾಧಿಕಾರಿ ಭೂಬಾಲನ್
ವಿಜಯಪುರ : ಭಯೋತ್ಪಾಧನಾ ವಿರೋಧಿ ದಿನ ಆಚರಣೆ ಅಂಗವಾಗಿ ಜಿಲ್ಲಾಧಿಕಾರಿಯ ಕಚೇರಿಯ ಕೆಸ್ವಾನ ಸಭಾಂಗಣದಲ್ಲಿ ನಡೆದ ಮಳೆಯಿಂದಾಗುವ ಹಾನಿಗಳ ತಡೆಗಟ್ಟುವ ಕ್ರಮಗಳ ಕೈಗೊಳ್ಳುವ ಮುನ್ನೇಚರಿಕಾ ಕ್ರಮಗಳ ಕುರಿತು ನಡೆದ ಸಭೆಯ ಆರಂಭಕ್ಕೂ ಮೊದಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಎಲ್ಲ ಅಧಿಕಾರಿ ಸಿಬ್ಬಂದಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಭಯೋತ್ಪಧನಾ ವಿರೋಧಿ ದಿನದ ಅಂಗವಾಗಿ ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿಸುತ್ತೇವೆ. ನಮ್ಮ ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ನಾವು ಪಣ ತೊಡುತ್ತೇವೆ ಎಂದು ಪ್ರತಿಜ್ಞೆ ಬೋಧಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಣಾಧಿಕಾರಿ ರಿಷಿ ಆನಂದ, ಅಪ್ಪರ ಜಿಲ್ಲಾಧಿಕಾರಿ ಸೊಮಲಿಂಗ ಗೆಣ್ಣೂರ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು


















