ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ
ವಿಜಯಪುರ 30: ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಜೂನ 1, ರವಿವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆ.10ಗಂ. ಇಟ್ಟಂಗಿಹಾಳ ರಸ್ತೆಯಲ್ಲಿರುವ ಕೆ.ಎಚ್.ಬಿ ಕಾಲೋನಿಗೆ 5 ನೇ ಹಣಕಾಸು ಯೋಜನೆಯಡಿ ರೂ. 90 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆ.11ಗಂ. ವಿಜಯಪುರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸುವರು. ಬೆ.11.30ಗಂ. ‘ಹಸಿರು ವಿಜಯಪುರ’ ಅಂಗವಾಗಿ ಜಿಲ್ಲಾಪಂಚಾಯತ ಆವರಣದಲ್ಲಿ ಬೃಹತ್ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮ.12ಗಂ. ಜಿಲ್ಲಾಪಂಚಾಯತನಲ್ಲಿ ನಡೆಯುವ ಜಿಲ್ಲಾ ಮಟ್ಟದ ಪ್ರಮುಖ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮ.12.30ಗಂ. ಕನಕದಾಸ ಬಡಾವಣೆ ಒಳಾಂಗಣ ಕ್ರೀಡಾಂಗಣದಲ್ಲಿ ಬಾಸ್ಕೆಟ್ ಬಾಲ್ ಅಂಕಣ ಮತ್ತು ವ್ಯಾಯಾಮ ಶಾಲೆ ಉದ್ಘಾಟಿಸಲಿದ್ದಾರೆ.
ಸಾ.4 ರಿಂದ 6 ಗಂಟೆವರೆಗೆ ಸಾರ್ವಜನಿಕರ ಕುಂದುಕೊರತೆ ಆಲಿಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.