• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾದ ಸರ್ಕಾರದ ಸಾಧನೆ ಯೋಜನೆಗಳ ಮಾಹಿತಿ ವಸ್ತು ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಚಾಲನೆ

      Voiceofjanata.in

      June 21, 2025
      0
      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾದ ಸರ್ಕಾರದ ಸಾಧನೆ ಯೋಜನೆಗಳ ಮಾಹಿತಿ ವಸ್ತು ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಚಾಲನೆ
      0
      SHARES
      178
      VIEWS
      Share on FacebookShare on TwitterShare on whatsappShare on telegramShare on Mail

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾದ ಸರ್ಕಾರದ ಸಾಧನೆ ಯೋಜನೆಗಳ ಮಾಹಿತಿ ವಸ್ತು ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಚಾಲನೆ

      ವಿಜಯಪುರ, ಜೂ.20 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ರಾಜ್ಯ ಸರ್ಕಾರದ ಎರಡು ವರ್ಷದ ಸಾಧನೆ ಹಾಗೂ ಸರ್ಕಾರದ ಯೋಜನೆಗಳ ಕುರಿತು ಜೂ.20ರಿಂದ 26ರವರೆಗೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಿರುವ ಮಾಹಿತಿ ವಸ್ತು ಪ್ರದರ್ಶನ ಮಳಿಗೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಶುಕ್ರವಾರ ಚಾಲನೆ ನೀಡಿದರು.

      ವಸ್ತು ಪ್ರದರ್ಶನ ಮಳಿಗೆಗಳಲ್ಲಿ ಅಳವಡಿಸಲಾದ ಸರ್ಕಾರದ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ, ಯುವನಿಧಿ ಯೋಜನೆಗಳ ಸಮಗ್ರ ಮಾಹಿತಿ, ಫಲಾನುಭವಿಗಳ ಅನಿಸಿಕೆ, ಸರ್ಕಾರವು ವಸತಿ ರಹಿತರಿಗೆ ಸೂರು ಕಲ್ಪಿಸಿದ ಮಾಹಿತಿ, ಇಂದಿರಾ ಕ್ಯಾಂಟೀನ್, ಆರೋಗ್ಯ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳನ್ನೊಳಗೊಂಡ ಸಮಗ್ರ ಮಾಹಿತಿಯುಳ್ಳ ಫಲಕಗಳನ್ನು ಜಿಲ್ಲಾಧಿಕಾರಿಗಳು ವೀಕ್ಷಣೆ ಮಾಡಿದರು.

      ಮುಖ್ಯಮಂತ್ರಿಗಳೊಂದಿಗೆ ಜಿಲ್ಲಾಧಿಕಾರಿ ಸೆಲ್ಫಿ :  ವಸ್ತು ಪ್ರದರ್ಶನದಲ್ಲಿ ನಾಡಿನ ಜನರ ಬದುಕು ಬೆಳಗಿಸಿದ ಗ್ಯಾರಂಟಿ ಯೋಜನೆಗಳ ಸಮಗ್ರ ಮಾಹಿತಿ, ಯಶೋಗಾಥೆಯನ್ನೊಳಗೊಂಡ ಪುಸ್ತಕವನ್ನು ರಾಜ್ಯದ ಮುಖ್ಯಮಂತ್ರಿಗಳಿಂದ ಪಡೆಯುವಂತೆ ಬಿಂಬಿಸುವ ಸೆಲ್ಪಿ ತೆಗೆದುಕೊಂಡು ಜಿಲ್ಲಾಧಿಕಾರಿಗಳು ಎಲ್ಲರ ಗಮನ ಸೆಳೆದರು.

      ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳ ಲಾಭ ಪ್ರತಿಯೊಬ್ಬ ಅರ್ಹ ಫಲಾನುವಿಗಳಿಗೆ ದೊರಕಿಸುವ ನಿಟ್ಟಿನಲ್ಲಿ, ಗ್ಯಾರಂಟಿ ಯೋಜನೆಗಳು ಒಳಗೊಂಡಂತೆ ಸರ್ಕಾರದ ಜನಪರ ಯೋಜನೆಗಳ, ಅಭಿವೃದ್ಧಿ-ಸಾಧನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿನ್ನಿಡಲು ಮಾಹಿತಿ ವಸ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿರಿಸಲಾಗಿದೆ.

      ಸರ್ಕಾರದ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆ ಜಿಲ್ಲೆಯಲ್ಲಿ ಪ್ರಾರಂಭವಾದಾಗಿನಿಂದ ದಿನಾಂಕ : 18-06-2025ರವರೆಗೆ 13,54,27,837 ಮಹಿಳೆಯರು ಪ್ರಯಾಣಿಸಿದ್ದು, ಇದಕ್ಕಾಗಿ 440.34 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ.

      ಪ್ರತಿ ಮನೆಗೆ ಗರಿಷ್ಠ 200 ಯೂನಿಟ್‍ವರೆಗೆ ಉಚಿತ ವಿದ್ಯುತ್ ಸೌಕರ್ಯ ಒದಗಿಸುವ ಗೃಹಜ್ಯೋತಿ ಯೋಜನೆಯಡಿ ಈ ಯೋಜನೆ ಆರಂಭದಿಂದ ವಿಜಯಪುರ ಜಿಲ್ಲೆಯ ಫಲಾನುಭವಿಗಳು 435.43 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ ಮಾಡಿದ್ದು, 391.75 ಕೋಟಿ ರೂ. ಸರ್ಕಾರದಿಂದ ಅನುದಾನ ಇಲಾಖೆಗೆ ಲಭ್ಯವಾಗಿದೆ. ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 1882.43 ಕೋಟಿ ರೂ. ಅನುದಾನವನ್ನು ಕುಟುಂಬದ ಯಜಮಾನಿಗೆ ಖಾತೆಗೆ ಜಮೆ ಮಾಡಲಾಗಿದೆ. ಪ್ರಸಕ್ತ 2025-ರ ಫೆಬ್ರವರಿ ಹಾಗೂ ಮಾರ್ಚ್ ಮಾಹೆಯ 02 ಕಂತುಗಳ ಪಾವತಿ ಕಾರ್ಯ ಪ್ರಗತಿಯಲ್ಲಿದೆ. ವಿಜಯಪುರ ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಡಿಸೆಂಬರ್ 2024ರ ವರೆಗೆ ಒಟ್ಟು 4,59,849 ಅರ್ಹ ಫಲಾನುಭವಿಗಳಿಗೆ 457.03 ಕೋಟಿ ರೂ. ಹಣವನ್ನು ಅವರ ಖಾತೆಗೆಳಿಗೆ ಡಿಬಿಟಿ ಮೂಲಕ ಜಮೆ ಮಾಡಲಾಗಿದೆ. ಯುವ ನಿಧಿ ಯೋಜನೆಯಡಿ ಜಿಲ್ಲೆಯ 15794 ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದು, 19,48,23,000 ರೂ. ಪದವಿ ಅಭ್ಯರ್ಥಿಗಳಿಗೆ ಹಾಗೂ 12,28,500 ರೂ. ಡಿಪ್ಲೋಮಾ ಅಭ್ಯರ್ಥಿಗಳಿಗೆ ಸೇರಿದಂತೆ ಒಟ್ಟು 19,60,51,500 ರೂ. ಗಳನ್ನು ಡಿಬಿಟಿ ಮೂಲಕ ಹಣವನ್ನು ಜಮೆ ಮಾಡಲಾಗಿದೆ.

      ಸರ್ಕಾರ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ಯೋಜನೆ-ಕಾರ್ಯಕ್ರಮಗಳ ಮಾಹಿತಿಯನ್ನು ಈ ವಸ್ತು ಪ್ರದರ್ಶನದಲ್ಲಿ ಪ್ರಚುರಪಡಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ವಸ್ತು ಪ್ರದರ್ಶನ ವೀಕ್ಷಿಸಿ, ಮಾಹಿತಿ ಪಡೆದುಕೊಂಡು ಸರ್ಕಾರದ ಯೋಜನೆಗಳ ಲಾಭ ಪಡೆಯುವಂತೆ ಅವರು ಕರೆ ನೀಡಿದರು.

      ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆಗಳಾದ ವಾರ್ತಾ ಜನಪದ ಮಾಸಿಕ ಹಾಗೂ ವಿಜಯಪುರ ಜಿಲ್ಲೆಯ ಪಂಚನದಿಗಳ ಬೀಡಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಯಶೋಗಾಥೆ ಪುಸ್ತಕಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.

      ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ,ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ನಾರಾಯಣಪ್ಪ ಕುರುಬರ, ವಾರ್ತಾಧಿಕಾರಿ ಅಮರೇಶ ದೊಡಮನಿ, ಕ್ರೀಡಾ ಇಲಾಖೆ ಅಧಿಕಾರಿ ರಾಜಶೇಖರ ಧೈವಾಡಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಕೆಕೆಆರ್‍ಟಿಸಿ ಸಹಾಯಕ ಸಂಚಾರ ವ್ಯವಸ್ಥಾಪಕ ಜೆ.ಕೆ. ಹುಗ್ಗೆನ್ನವರ, ವಾರ್ತಾ ಇಲಾಖೆಯ ಸುರೇಶ ಅಂಬಿಗೇರ, ಮಂಜುಳಾ ದುರಗನ್ನವರ, ಪ್ರಶಿಕ್ಷಣಾರ್ಥಿ ವಿದ್ಯಾಶ್ರೀ ಹೊಸಮನಿ, ಶಕ್ತಿ ಯೋಜನೆಯಡಿ ಫಲಾನುಭವಿಗಳಾದ ಬಬಲಾದ ಗ್ರಾಮದ ಒಡಲಧ್ವನಿ ಸದಸ್ಯರು ಸೇರಿದಂತೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

      Tags: #District Collector T. Bhubalan Drive for Information Exhibition of Government Achievement Plans organized by the Department of Information and Public Relations#indi / vijayapur#Today News#Voice Of Janata#Voiceofjanata.in#ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಶಿವಾನಂದ ಹಿಳ್ಳಿ ಸೇವಾ ನಿವೃತ್ತಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.