ಲಿಂಗಸಗೂರ್: ಬಡವರ ಹಸಿವು ನೀಗಿಸುವ ಇಂದಿರಾ ಕ್ಯಾಂಟೀನ್ ಗ್ಲಾಸ್ ಒಡೆದು ಕಿಡಿಗೇಡಿಗಳು ಆಹಾರ ಸಾಮಾಗ್ರಿಗಳನ್ನು ಕದ್ದು ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಐತಿಹಾಸಿಕ ಮುದಗಲ್ಲ ಪಟ್ಟಣದಲ್ಲಿ ನೆಡೆದಿದೆ.
ಪಟ್ಟಣದ ಮುಖ್ಯ ಕೇಂದ್ರ ಬಿಂದುವಾದ ಪಶು ವೈದ್ಯಕಿಯ ಆಸ್ಪತ್ರೆ ಮುಂಭಾಗದಲ್ಲಿ ಇತ್ತೀಚಿಗೆ ಇಂದಿರಾ ಕ್ಯಾಂಟೀನ್ ಆರಂಭವಾಗಿತ್ತು. ಆರಂಭವಾದ ಕೆಲವೇ ದಿನಗಳಲ್ಲಿ ಈ ಒಂದು ಘಟನೆ ನಡದಿದೆ.
ಇಂದಿರಾ ಕ್ಯಾಂಟೀನ್ ಬಾಗಿಲು ಗ್ಲಾಸ್ ಹೊಡೆದು ದಿನಸಿ ಸಾಮಗ್ರಿಗಳನ್ನು ದುರುಳರು ಅಕ್ಕಿ ಪಾಕೆಟ್ ಹಾಗೂ ಊಟದ ತಟ್ಟೆಗಳನ್ನು ಕಳ್ಳತನ ಮಾಡಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್ ಠಾಣೆಯ ಪೋಲೀಸರು ಭೇಟಿ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ.