• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

      Voiceofjanata.in

      July 1, 2025
      0
      ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ
      0
      SHARES
      17
      VIEWS
      Share on FacebookShare on TwitterShare on whatsappShare on telegramShare on Mail

      ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

      ವಿಜಯಪುರ; ಬಬಲೇಶ್ವರ ಮತಕ್ಷೇತ್ರದಲ್ಲಿ ಯೋಜನೆಗಳಿಗೆ ಅನುಕೂಲವಿರುವ ಎಲ್ಲ ಸ್ಥಳಗಳಲ್ಲಿ ಕೆರೆ ಮತ್ತು ಬಾಂದಾರ ನಿರ್ಮಿಸುವ ಮೂಲಕ ನೀರಾವರಿ ಮಾಡಲಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.

      ಶನಿವಾರ ಮುಸ್ಸಂಜೆ ಬಬಲೇಶ್ವರ ತಾಲೂಕಿನ ಸಂಗಾಪುರ ಎಸ್. ಎಚ್. ಬಳಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ರೂ. 220 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಜಿನುಗು ಕೆರೆ ಯೋಜನೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

      ಬಬಲೇಶ್ವರ ಮತಕ್ಷೇತ್ರದಲ್ಲಿ ಈಗಾಗಲೇ ಯೋಜನೆಗಳಿಗೆ ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ. ಸಂಗಾಪುರ ಎಸ್. ಎಚ್. ಗ್ರಾಮಕ್ಕೆ ಅಗತ್ಯವಾಗಿರುವ ಮತ್ತೋಂದು ಕೆರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಗ್ರಾಮದ ಬಳಿ ಅಗತ್ಯವಾಗಿರುವ ಸೇತುವೆ ನಿರ್ಮಾಮ ಯೋಜನೆಯನ್ನು ಈಗಾಗಲೇ ನಬಾರ್ಡ್ ಯೋಜನೆಯಡಿ ಸೇರಿಸಲಾಗಿದೆ. ಪ್ರಗತಿಪಥ ಯೋಜನೆಯಡಿ ಇನ್ನೋಂದು ರಸ್ತೆ ನಿರ್ಮಿಸಲಾಗುವುದು. ಸಂಗಾಪುರ ಎಸ್. ಎಚ್. ಗ್ರಾಮ ಸಣ್ಣದಾದರೂ ಇಲ್ಲಿನ ಜನ ಶ್ರಮಜೀವಿಗಳಾಗಿದ್ದು, ಕೃಷಿಗೆ ಆದ್ಯತೆ ನೀಡುವ ಮೂಲಕ ಬಾಳನ್ನು ಹಸನು ಮಾಡಿಕೊಂಡಿದ್ದಾರೆ. ಗ್ರಾಮಸ್ಥರಗಿ ನನ್ನ ಬಗ್ಗೆ ಅಪಾರ ಕಾಳಜಿಯಿದ್ದು, ನನಗೂ ಗ್ರಾಮದ ಮೇಲೆ ಅವರಷ್ಟೇ ಪ್ರೀತಿಯಿದೆ. ಗ್ರಾಮದ ಮಠದ ಬಾಕಿ ಕಾಮಗಾರಿಗೆ ಅನುದಾನ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.

      ಸಂಗಾಪುರ ಎಸ್. ಎಚ್. ಗ್ರಾಮದ ಮುಖಂಡ ರಮೇಶ ಬದ್ರಿ ಮಾತನಾಡಿ, ಗ್ರಾಮಸ್ಥರು ಪ್ರತಿಬಾರಿಯೂ ಸಚಿವ ಎಂ. ಬಿ. ಪಾಟೀಲ ಅವರಿಗೆ ಹೆಚ್ಚೆಚ್ಚು ಬೆಂಬಲ ನೀಡುತ್ತ ಬಂದಿದ್ದಾರೆ. ಹೀಗಾಗಿ ಅವರು ನಮ್ಮ ಸಣ್ಣ ಗ್ರಾಮಸ್ಥರ ಬೇಡಿಕೆಗೆ ಸಕಲ ರೀತಿಯಿಂದಲೂ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು.

      ಕಮರಿಮಠದ ಶ್ರೀ ಅಭಿನವ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ಸಚಿವ ಎಂ. ಬಿ. ಪಾಟೀಲ ಅವರು ಬಸವನಾಡಿನ ಭಗೀರಥರಾಗಿದ್ದು, ತಮಗೆ ವಹಿಸಿರುವ ಪ್ರತಿಯೊಂದು ಖಾತೆಗೆ ನ್ಯಾಯ ಒದಗಿಸುವ ಮೂಲಕ ಆ ಖಾತೆಗಳಿಗೆ ಮೆರಗು ತರುವ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ವಿಜಯಪುರ ಜಿಲ್ಲೆಯ ಹೆಸರನ್ನು ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

      ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್ ಸಾಹೇಬಗೌಡ ಬಿರಾದಾರ ಮಾತನಾಡಿ, 4.50 ಎಕೆರೆ ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ಈ ಕೆರೆಯು ಸುಮಾರು 125ಎಕರೆ ಭೂಮಿಗೆ ನೀರಾವರಿ ಕಲ್ಪಿಸಲಿದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಆನಂದಕುಮಾರ ಸಿ. ದೇಸಾಯಿ, ಮುಖಂಡರಾದ ಮುತ್ತಪ್ಪ ಶಿವಣ್ಣವರ, ಶ್ರೀಶೈಲಗೌಡ ಪಾಟೀಲ ನಿಡೋಣಿ, ಚನ್ನಪ್ಪ ಕೊಪ್ಪದ, ವಿ. ಎಸ್. ಪಾಟೀಲ, ಬಸವರಾಜ ದೇಸಾಯಿ, ಮಲ್ಲು ದಳವಾಯಿ, ಜಗದೀಶ ಹಿರೆದೇಸಾಯಿ ಜೈನಾಪುರ, ಶಂಕರಗೌಡ ಪಾಟೀಲ, ಅಪ್ಪುಗೌಡ ಪಾಟೀಲ ಶೇಗುಣಸಿ, ಡಾ. ಕೆ. ಎಚ್. ಮುಂಬಾರೆಡ್ಡಿ, ಮಹಾದೇವಪ್ಪ ಮದರಖಂಡಿ, ರಾಮಲಿಂಗ ಕೊಕಟನೂರ, ರಾಜು ಬಡ್ರಿ ಮುಂತಾದವರು ಉಪಸ್ಥಿತರಿದ್ದರು.

      1 Minister MBP Sangapur SH Jinigu Kere Bhumipuje

      ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಂಗಾಪುರ ಎಸ್. ಎಚ್. ಗ್ರಾಮದ ಬಳಿ ನಡೆದ ಕಾರ್ಯಕ್ರಮದಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ರೂ. 220 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಜಿನುಗು ಕೆರೆ ಯೋಜನೆಗೆ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಮರಿಮಠದ ಶ್ರೀ ಅಭಿನವ ಸಿದ್ಧಲಿಂಗ ಸ್ವಾಮೀಜಿ, ಆನಂದಕುಮಾರ ಸಿ. ದೇಸಾಯಿ ಮುಂತಾದವರು ಉಪಸ್ಥಿತರಿದ್ದರು.

      2 Minister MBP Sangapur SH Jinigu Kere Bhumipuje

      ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಂಗಾಪುರ ಎಸ್. ಎಚ್. ಗ್ರಾಮದ ಬಳಿ ನಡೆದ ಕಾರ್ಯಕ್ರಮದಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ರೂ. 220 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಜಿನುಗು ಕೆರೆ ಯೋಜನೆಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಮರಿಮಠದ ಶ್ರೀ ಅಭಿನವ ಸಿದ್ಧಲಿಂಗ ಸ್ವಾಮೀಜಿ, ಆನಂದಕುಮಾರ ಸಿ. ದೇಸಾಯಿ, ಶ್ರೀಶೈಲಗೌಡ ಪಾಟೀಲ ನಿಡೋಣಿ, ವಿ. ಎಸ್. ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Public News#State News#Suitable areas are built#Today News#Voice Of Janata#Voiceofjanata.in#ಸೂಕ್ತವಾದ ಪ್ರದೇಶಗಳಲ್ಲಿ ಕೆರೆBandara: Minister MB PatilIngu Lakeಇಂಗು ಕೆರೆಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.