ರಾಜ್ಯ ಸರಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ಮುದ್ದೇಬಿಹಾಳ ತಾಲೂಕಾ ಜೆಡಿಎಸ್ ಪಕ್ಷದ ವತಿಯಿಂದ ಪ್ರತಿಭಟನೆ.
ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಉತ್ತಮ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲ
ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ ; ರಾಜ್ಯ ಸರಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ಮುದ್ದೇಬಿಹಾಳ ತಾಲೂಕಾ ಜೆಡಿಎಸ್ ಪಕ್ಷದ ವತಿಯಿಂದ ಪ್ರತಿಭಟನೆಯನ್ನು ಸೋಮುವಾರ ನಡೆಸಲಾಯಿತು ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭವಾದ ಪ್ರತಿಭಟನೆ ತಹಶಿಲ್ದಾರ ಕಚೇರಿಯವರಗೆ ಮಾಡಲಾಯಿತು.
ಈ ವೇಳೆ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಉತ್ತಮ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಸರಕಾರದ ಎಲ್ಲಾ ಇಲಾಖೆಗಳಲ್ಲಿ ಲಂಚಗುಳಿತನ, ಭ್ರಷ್ಟಾಚಾರ, ದುರಾಡಳಿತ ಮಾಡುತ್ತಿದೆ ಹಾಗೂ ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ ಆರೋಪ ಹೊತ್ತಿರುವ ವಸತಿ ಸಚಿವ .ಜಮೀರ್ ಅಹಮದ್ ಖಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಆಕ್ರೋಶ ವ್ಯಕ್ತಪಡಿಸಿದರು.
ನೀರಾವರಿ ತಜ್ಞ ಜೆಡಿಎಸ್ ಮುಖಂಡ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಹಿರೇಮುರಾಳ ಮಾತನಾಡಿ ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಸ್ವ ಪಕ್ಷದ ಸಚಿವರು, ಶಾಸಕರು, ಕಾಂಗ್ರೆಸ್ ಮುಖಂಡರೇ ಬಹಿರಂಗವಾಗಿ ಹೇಳುತ್ತಿದ್ದಾರೆ. ಗುತ್ತಿಗೆದಾರರ ಬಾಕಿ ಹಣ ಪಾವತಿಯಲ್ಲೂ ವಿಳಂಬ ನೀತಿ ಅನುಸರಿಸಿ, ಭ್ರಷ್ಟಾಚಾರ ಮಾಡಲಾಗುತ್ತಿದೆ. ರೈತ ವಿರೋಧಿ ಸರ್ಕಾರವಾಗಿ ಮಾರ್ಪಟ್ಟಿದ್ದು, ಪರಿಶಿಷ್ಟರಿಗೆ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಂಡು ಅನ್ಯಾಯ ಮಾಡಲಾಗುತ್ತಿದೆ. ಕೇವಲ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದು, ರಾಜ್ಯದ ಜನರಿಗೆ ಘನಘೋರ ಅನ್ಯಾಯವೆಸಗುತ್ತಿದೆ ಎಂದು ದೂರಿದರು.
ಮನವಿ ಪತ್ರವನ್ನು ಜೆಡಿಎಸ್ ತಾಲೂಕ ಅಧ್ಯಕ್ಷ ಪಿಎಂ ಹವಾಲ್ದಾರ್ ಓದಿ ತಹಶಿಲ್ದಾರ ಬಲರಾಮ ಕಟ್ಟಿಮನಿ ಮೂಲಕ ರಾಜ್ಯಪಾಲರಿಗೆ ನೀಡಲಾಯಿತು.
ಪ್ರತಿಭಟನೆಯಲ್ಲಿ ಜೆಡಿಎಸ್ ಪಕ್ಷದ ಮುಖಂಡರಾದ ಬಸವಂತರಾಯ ದೇಸಾಯಿ, ಸೈಯದ್ ಸಾತಿಹಾಳ, ಲಾಳೆಮಶಾಕ ನಾಯ್ಕೋಡಿ, ಅಕ್ಬರುದ್ದಿನ ಮುಲ್ಲಾ, ಮೋತಿಲಾಲ ಮ್ಯಾಗೇರಿ, ಅಬ್ದುಲ ಮಜೀದ್,ಅನ್ವರಸಾಬ ಟಕ್ಕಳಕಿ, ಅಶೋಕ ಅಮರಣ್ಣವರ ಸೇರಿದಂತೆ ಪಕ್ಷದ ಕಾರ್ಯಕರ್ತರು ರೈತ ಮುಖಂಡರು ಭಾಗವಹಿಸಿದ್ದರು
ನಾರಾಯಣಪುರ ಎಡದಂಡೆ ಬಲದಂಡೆ ಬಂದ್ ಮಾಡಬೇಕಾಗುತ್ತದೆ ರೈತರು ದಂಗೆ ಏಳುವ ಸ್ಥಿತಿ ತಲುಪಿದ್ದಾರೆ, ,ಚಿಮ್ಮಲಗಿ ಏತನೀರಾವರಿ, ನಾಗರಬೆಟ್ಟ ಏತನೀರಾವರಿ ಮನಸ್ಸಿಗೆ ಬಂದಾಗ ನೀರು ಬಿಡುತ್ತಾರೆ, ರಾಜ್ಯ ಕಾಂಗ್ರೆಸ್ ಸರಕಾರ ಬಂದರೆ ಲಕ್ಷ ಕೋಟಿ ನೀಡುತ್ತೇನೆಂದ ಸಿದ್ದರಾಮಯ್ಯ ಕೊಟ್ಟ ಮಾತನ್ನು ಮರೆತಿದ್ದಾರೆ ; ಬಸನಗೌಡ ಪಾಟೀಲ್ ಹಿರೇಮುರಾಳ, ಜೆಡಿಎಸ್ ಹಿರಿಯ ಮುಖಂಡರು.