ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ
ವಿಜಯಪುರ ಜು.02: ನಗರದ ಸ್ಟೇಶನ್ ರಸ್ತೆಯಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಮಂಗಳವಾರ ಕಚೇರಿ ಆವರಣದಲ್ಲಿ ವಾರ್ತಾಧಿಕಾರಿ ಅಮರೇಶ ದೊಡಮನಿ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿಯೊಬ್ಬರು ಪರಿಸರ ರಕ್ಷಣೆಗೆ ಮುಂದಾಗಬೇಕು. ಪರಿಸರ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಇಂದಿನಿಂದಲೇ ನಾವು ಪರಿಸರವನ್ನು ಕಾಪಾಡಿಕೊಂಡು ಹೋದಲ್ಲಿ ಮುಂದಿನ, ಭವಿಷ್ಯದ ಪೀಳಿಗೆಗೆ ಸ್ವಚ್ಛ ಸುಂದರ ಪರಿಸರ ನೀಡಬಹುದಾಗಿದೆ. ಈ ನಿಟ್ಟಿನಲ್ಲಿ ಮನೆ, ಕಚೇರಿ ಆವರಣಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ರಕ್ಷಣೆಗೆ ಕೈ ಜೋಡಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ವಾರ್ತಾ ಇಲಾಖೆಯ ಸುರೇಶ ಅಂಬಿಗೇರ, ಅಬ್ದುಲರಜಾಕ ಬಾಗೇವಾಡಿ ಪ್ರಕಾಶ ಘಟಕಾಂಬಳೆ, ನಾಗರಾಜ ಉಪಸ್ಥಿತರಿದ್ದರು.