ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ
ವಿಜಯಪುರ : ದಕ್ಷಿಣ ಕನ್ನಡ, ಮಂಗಳೂರು ಜಿಲ್ಲೆಯ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಗಿದ್ದ ಡಾ. ಆನಂದ್ ಕೆ, ಐಎಎಸ್ (ಕೆಎನ್: 2016) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಜಾಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಇಲ್ಲಿಯವರೆಗೆ ಬಿಜಾಪುರ ಜಿಲ್ಲಾಧಿಕಾರಿಯಾಗಿದ್ದ ಭೂಬಾಲನ್ ಟಿ, ಐಎಎಸ್ ಅವರನ್ನು ವರ್ಗಾಯಿಸಿ, ಅವರ ಸ್ಥಾನಕ್ಕೆ ಡಾ. ಆನಂದ್ ಕೆ. ಅವರನ್ನು ನೇಮಿಸಲಾಗಿದೆ. ಈ ಆದೇಶವು ಮುಂದಿನ ಸೂಚನೆ ಬರುವವರೆಗೆ ಜಾರಿಯಲ್ಲಿರುತ್ತದೆ ಎಂದು ತಿಳಿದುಬಂದಿದೆ. ಡಾ. ಆನಂದ್ ಕೆ. ಅವರು ತಮ್ಮ ಹೊಸ ಹುದ್ದೆಯನ್ನು ತಕ್ಷಣವೇ ವಹಿಸಿಕೊಳ್ಳುವಂತೆ ಸರ್ಕಾರಿ ಆದೇಶದಲ್ಲಿ ಸೂಚಿಸಲಾಗಿದೆ.