ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು
ವಿಜಯಪುರ: ವಿದ್ಯಾರ್ಥಿಗಳು ಅಂತರಾಷ್ಟಿçÃಯ ಮಟ್ಟದಷ್ಟೇ ಅಲ್ಲದೆ, ಭಾರತ ಮತ್ತು ಕರ್ನಾಟಕ ಸರ್ಕಾರಗಳಿಂದ ನೀಡಲಾಗುವ ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಉದ್ಯೋಗ ಮತ್ತು ವೃತ್ತಿ ಸಮಾಲೋಚನಾ ಕೋಶ, (ಐಕ್ಯೂಎಸಿ) ಹಾಗೂ ಅಂತರಾಷ್ಟಿçಯ ಕೋಶದ ವತಿಯಿಂದ ಆಯೋಜಿಸಿದ್ದ ‘ವಿದೇಶದಲ್ಲಿ ಉನ್ನತ ವ್ಯಾಸಂಗ ಹಾಗೂ ಉದ್ಯೋಗ’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುವುದು ವಿಶೇಷವಾಗಿ ಮಹಿಳೆಯರಿಗೆ ಉನ್ನತ ಮಟ್ಟದ ಸಾಧನೆ ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆಯಲು ಉತ್ತಮ ಅವಕಾಶವನ್ನು ಒದಗಿಸುತ್ತದೆ ಎಂದರು.ಕಾರ್ಯಕ್ರಮದಲ್ಲಿ ಬೆಂಗಳೂರಿನ ವಿದ್ಯಾಲೋಕ ಅಂತರಾಷ್ಟಿçÃಯ ಶಿಕ್ಷಣ ಮತ್ತು ವಲಸೆ ಸಲಹಾಗಾರರಾದ ಕೃಷ್ಣಾ ಸಾಗರ, ಹರ್ಷಾ ಹಾಗೂ ಸೈಹಿದಾ ಮಲಿಹಾನಾಜ್ ಮಾತನಾಡಿ, ವಿದೇಶಿ ವಿಶ್ವವಿದ್ಯಾಲಯಗಳ ವಿವರ, ವಿವಿಧ ಕೋರ್ಸ್ಗಳು, ಶಿಷ್ಯವೇತನ ಸೌಲಭ್ಯಗಳು ಹಾಗೂ ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದಿಂದ ಎಸ್.ಸಿ, ಎಸ್.ಟಿ. ಹಾಗೂ ಓ.ಬಿ.ಸಿ. ವಿದ್ಯಾರ್ಥಿಗಳಿಗೆ ಲಭ್ಯವಿರುವ ಶಿಷ್ಯವೇತನ ಯೋಜನೆಗಳ ಬಗ್ಗೆ ಅವರು ಸಮಗ್ರ ಮಾಹಿತಿಯನ್ನು ನೀಡಿದರು. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳು ಪ್ರವೇಶ ಪಡೆದು ಯಶಸ್ವಿಯಾಗಿ ಮುಂದುವರೆದಿರುವ ಉದಾಹರಣೆಗಳನ್ನು ಅವರು ವಿವರಿಸಿದರು.
ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ವಿದ್ಯಾರ್ಥಿಗಳು ಸರ್ಕಾರದಿಂದ ಲಭ್ಯವಿರುವ ಶಿಷ್ಯವೇತನ ಹಾಗೂ ಇತರೆ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು. ಜೊತೆಗೆ ವಿದೇಶಿ ವಿಶ್ವವಿದ್ಯಾಲಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಆಸಕ್ತಿದಾಯಕ ಪ್ರಶ್ನೆಗಳನ್ನೂ ಕೇಳಿದರು.
ಕಾರ್ಯಕ್ರಮದಲ್ಲಿ ಪ್ರೊ.ಪಿ.ಜಿ.ತಡಸದ, ಡಾ. ಗವಿಸಿದ್ದಪ್ಪ ಆನಂದಹಳ್ಳಿ, ಪ್ರೊ. ವಿಷ್ಣು ಶಿಂದೆ, ಡಾ. ಪ್ರಕಾಶ ಸನ್ನಕ್ಕನವರ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಡಾ.ಬಾಬು ಆರ್.ಎಲ್. ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು.