ಅಬ್ಬಬ್ಬಾ..! ಕೆನರಾ ಬ್ಯಾಂಕ್ ದರೋಡೆಯಲ್ಲಿ ಮತ್ತೆ 12 ಜನರ ಬಂಧನ
ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಮತ್ತೇ 12 ಜನರು ಬಂಧಿಸಲಾಗಿದೆ. ಒಟ್ಟು ಇಲ್ಲಿಯ ವರೆಗೆ 15 ಜನರ ಆರೋಪಿಗಳ ಬಂಧನವಾಗಿದೆ. ಬಾಲರಾಜ್ ಮಣಿಕಮ್ ಯರೆಕುಲಾ, ಚಂದನರಾಜ್ ಪಿಳ್ಳೈ, ಗುಂಡು ಜೋಸೆಫ್ ಶ್ಯಾಮಬಾಬು, ಪೀಟರ್ ಚಂದ್ರಪಾಲ್, ಇಜಾಜ್ ಧಾರವಾಡ, ಸುಸೈರಾಜ್ ಡ್ಯಾನಿಯಲ್, ಬಾಬುರಾವ್ ಮಿರಿಯಾಲ್, ಮಹಮ್ಮದ್ ಆಸೀಫ್ ಕಲ್ಲೂರ, ಅನಿಲ್ ಮಿರಿಯಾಲ್, ಮೋಹನಕುಮಾರ, ಸುಲೇಮನ್‌ವೇಸ್ಲಿ ಪಲುಕುರಿ, ಮರಿಯಾದಾಸ ಗೋನಾ ಬಂಧಿತ ಆರೋಪಿಗಳು. ಬಂಧಿತರು ಹುಬ್ಬಳ್ಳಿ ಮೂಲದವರು. ಅಲ್ಲದೇ ಈ ಹಿಂದೆ ಮೂವರು ಆರೋಪಿಗಳ ಬಂಧನ ಮಾಡಲಾಗಿತ್ತು. ಇದೀಗ್ ಬಂಧಿತ ಆರೋಪಿಗಳಿಂದ 39 ಕೆಜಿ ಗಟ್ಟಿ ಬಂಗಾರ, 1.16 ಕೋಟಿ ನಗದು, ಕೃತ್ಯಕ್ಕೆ ಬಳಸಿದ ವಾಹನಗಳು ಸೇರಿದಂತೆ 39.26 ಕೋಟಿ ಅಧಿಕ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.


















