VOJ ನ್ಯೂಸ್ ಡೆಸ್ಕ್:
ಬೆಂಗಳೂರು: ಹಿರಿಯ ನಟ ಕಲಾ ತಪಸ್ವಿ ರಾಜೇಶ್ (89) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ನಟ ರಾಜೇಶ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ. 1932 ಏಪ್ರಿಲ್ 15 ರಂದು ಬೆಂಗಳೂರಿನಲ್ಲಿ ಜನಿಸಿದ್ದ ರಾಜೇಶ್ ಬಿಡುಗಡೆ, ಮುಗಿಯದ ಕಥೆ, ಕಪ್ಪು ಬಿಳುಪು, ಸೊಸೆ ತಂದ ಸೌಭಾಗ್ಯ, ದೇವರ ದುಡ್ಡು, ಕಲಿಯುಗ, ದೇವರಗುಡಿ, ವೀರ ಸಂಕಲ್ಪ, ಗಂಗೆ ಗೌರಿ ಸೇರಿದಂತೆ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು.