ಇಂಡಿ ಮಿನಿ ವಿಧಾನಸೌಧದಲ್ಲಿ ಲೋಕಾಯುಕ್ತ ದಾಳಿ..!
ಇಂಡಿ : ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ಸೋಮವಾರ ಬೆಳ್ಳಂ-ಬೆಳಿಗ್ಗೆ ಇಂಡಿ ನಗರದ ವಿವಿಧ ಇಲಾಖೆಗಳ ಮೇಲೆ ದಾಳಿ ನಡೆಸಿ ಕಡತಗಳನ್ನು ಪರಿಶೀಲಿಸಿ, ಸಾರ್ವಜನಿಕ ಅಹವಾಲು ಸ್ವೀಕರಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ಇಂಡಿ ನಗರದ ಮಿನಿ ವಿಧಾನಸೌಧದಲ್ಲಿರುವ ತಹಸೀಲ್ದಾರ ಇಲಾಖೆ, ಉಪ ನೋಂದಣಿ ಕಾರ್ಯಾಲಯ, ಎಡಿಎಲ್‌ಆರ್ ಕಚೇರಿಗಳ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಕಡತಗಳನ್ನು ಪರಿಶೀಲಿಸಿ, ಬಹು ದಿನಗಳಿಂದ ಬಾಕಿ ಉಳಿದುಕೊಂಡ ಪ್ರಕರಣಗಳ ಮಾಹಿತಿ ಕಲೆ ಹಾಕಿದರು.
ನಂತರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಲ್ಲಿ ಕಡತಗಳನ್ನು ಪರಿಶೀಲಿಸಿರು, ನಂತರ ಇಂಡಿ ಪುರಸಭೆ ಕಾರ್ಯಾಲಯಕ್ಕೆ ಬೇಟಿ ನೀಡಿ ಕಡತಗಳನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ನಂತರ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಲೋಕಾಯುಕ್ತ ಅಧಿಕಾರಿಗಳು ಅವರ ಸಮಸ್ಯೆಗಳ ಬಗ್ಗೆ ಸ್ಥಳದಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಸಮಸ್ಯೆಗಳ ಪರಿಹಾರಕ್ಕೆ ಸೂಚಿಸಿದರು.
ಈ ದಾಳಿಯಲ್ಲಿ ಕರ್ನಾಟಕ ರಾಜ್ಯ ಲೋಕಾಯುಕ್ತ ನ್ಯಾಯಮೂರ್ತಿ ಎ ವಿ ಪಾಟೀಲ, ಶಿವರಾಜ್ ಪಾಟೀಲ್, ಆನಂದ ಪಡಶೆಟ್ಟಿ ಹಾಗೂ ಶರಣಬಸು, ರವಿ ಪುರುಶೊತ್ತಮ, ಶಿವರಾಜ್ ಸ್ವಾಮಿ, ಹಾಗೂ ಅಜೀತ ಸೇರಿದಂತೆ ಸಿಬ್ಬಂದಿಗಳು ಈ ದಾಳಿಯಲ್ಲಿ ಪಾಲ್ಗೊಂಡಿದ್ದರು.