ಸ್ವಯಂ ಪ್ರೇರಿತ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರ
ವಿಜಯಪುರ: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಹಾಗೂ ಸಂಶೋಧನೆ ಕೇಂದ್ರದ ವತಿಯಿಂದ ಜಿಲ್ಲಾ ಪೊಲೀಸ್ ಸಶಸ್ತ್ರ ಮೀಸಲು ಪಡೆ ವಿಭಾಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರ ಇತ್ತೀಚೆಗೆ ನಡೆಯಿತು.
ಈ ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ ಜೊತೆಗೆ ಎಲುಬು ಮತ್ತು ಕೀಲು ಚಿಕಿತ್ಸೆ, ನೇತ್ರ ತಪಾಸಣೆ, ಚಿಕ್ಕ ಮಕ್ಕಳ ಆರೋಗ್ಯ ತಪಾಸಣೆ, ಚರ್ಮರೋಗ ಚಿಕಿತ್ಸೆ ಹಾಗೂ ಸ್ತ್ರೀರೋಗ ಮತ್ತು ಪ್ರಸುತಿ ಚಿಕಿತ್ಸೆ ವಿಭಾಗದ ನುರಿತ ತಜ್ಞ ವ್ಯದ್ಯರು ಆರೋಗ್ಯ ತಪಾಸಣೆ ನಡೆಸಿದರು. ಈ ಶಿಬಿರದಲ್ಲಿ ಸುಮಾರು 130 ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಈ ಶಿಬಿರದಲ್ಲಿ 40 ಜನ ಪೊಲೀಸ ಸಿಬ್ಬಂದಿ ಸ್ವಯಂ ಪ್ರೇರಿತವಾಗಿ ರಕ್ತದ ಗುಂಪು ತಪಾಸಣೆ ಮಾಡಿಸಿಕೊಂಡು ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ಎಸ್ಪಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಎಸ್ಪಿ ರಾಮನಗೌಡ ಹಟ್ಟಿ, ಡಿಆರ್ ವಿಭಾಗದ ಡಿವೈಎಸ್ಪಿ ಎಂ. ಎ. ಉಪಾಸೆ, ಆರ್ ಪಿ ಐ ವಿಠ್ಠಲ ಕೊಕಟನೂರ, ಐ. ಎಫ್. ತೇಲಿ, ಬಿ. ಎಲ್. ಡಿ. ಈ ಆಸ್ಪತ್ರೆಯ ವೈದ್ಯಕೀಯ ಅಧಿಕ್ಷಕ ಡಾ. ಆರ್. ಎಂ. ಹೊನ್ನುಟಗಿ, ವೈದ್ಯಕೀಯ ಚಿಕಿತ್ಸೆ ವಿಭಾಗದ ತಜ್ಞರಾದ ಡಾ. ಪ್ರೀತಂ ಭೈರೊಡಗಿ, ಡಾ. ಮಂಜುನಾಥ ಭೂಸನೂರ, ರಕ್ತ ಭಂಡಾರ ನಿಧಿ ಕೇಂದ್ರದ ಆಡಳಿತಾಧಿಕಾರಿ ಡಾ. ಸತೀಶ ಅರಕೇರಿ, ಡಾ. ಭಾಗ್ಯಶಾಲಿ, ಆಸ್ಪತ್ರೆಯ ಬೋಧಕರ ಹೊರತಾದ ಸಿಬ್ಬಂದಿ ಉಪಸ್ಥಿತರಿದ್ದರು.
Blood Donation Camp
ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಹಾಗೂ ಸಂಶೋಧನೆ ಕೇಂದ್ರದ ವತಿಯಿಂದ ಜಿಲ್ಲಾ ಪೊಲೀಸ್ ಸಶಸ್ತ್ರ ಮೀಸಲು ಪಡೆ ವಿಭಾಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರ ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ಎಸ್ಪಿ ಲಕ್ಷ್ಮಣ ನಿಂಬರಗಿ, ರಾಮನಗೌಡ ಹಟ್ಟಿ, ಎಂ. ಎ. ಉಪಾಸೆ, ವಿಠ್ಠಲ ಕೊಕಟನೂರ, ಐ. ಎಫ್. ತೇಲಿ, ಡಾ. ಆರ್. ಎಂ. ಹೊನ್ನುಟಗಿ ಮುಂತಾದವರು ಉಪಸ್ಥಿತರಿದ್ದರು.