ವೈದ್ಯಕೀಯ ಕಾಲೇಜು ಪಿಪಿಪಿ ಮಾದರಿಯನ್ನು ಕೈಬಿಡಬೇಕು..!
ವಿಜಯಪುರ : ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಪತ್ರಿಕಾ ಗೋಷ್ಠಿಯನ್ನು ಏರ್ಪಡಿಸಲಾಗಿತ್ತು. ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಂಚಲನಾ ಸಮಿತಿ ಸದಸ್ಯರಾದ ಅರವಿಂದ ಕುಲಕರ್ಣಿ ಯವರು ಮಾತನಾಡುತ್ತಾ ಪಿಪಿಪಿ ಮಾದರಿಯನ್ನು ಕೈಬಿಡಬೇಕು, ಸರ್ಕಾರ ಅದರ ಸಂಪೂರ್ಣ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಹೇಳಿದರು.ಇನ್ನೊರ್ವ ಸಮಿತಿ ಸದಸ್ಯರಾದ ಬಿ.ಭಗವನ್ ರೆಡ್ಡಿ ಯವರು ಮಾತನಾಡುತ್ತಾ ಇಂದು ಸರ್ಕಾರಿ ಕಾಲೇಜನ್ನು ಸಂಪೂರ್ಣವಾಗಿ ಸರ್ಕಾರವೇ ಜವಾಬ್ದಾರಿ ತೆಗೆದುಕೊಂಡು ಮಾಡಬೇಕು. ೯ ನೇ ತಾರೀಖಿನಂದು ಜಿಲ್ಲೆಯಾದ್ಯಂತ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ. ಈ ರ‍್ಯಾಲಿಗೆ ಜಿಲ್ಲೆಯ ಎಲ್ಲಾ ಸಾಹಿತಿಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು.ಅಣ್ಣರಾಯ ಈಳಗೇರ ರವರು ಮಾತನಾಡುತ್ತಾ ಯಾವುದೇ ಕಾರಣಕ್ಕೂ ವೈದ್ಯಕೀಯ ಕಾಲೇಜನ್ನು ಖಾಸಗೀಯವರಿಗೆ ಮಾರಾಟ ಮಾಡಲು ಬಿಡುವುದಿಲ್ಲ ಎಂದು ಹೇಳಿದರು.
ಶ್ರೀನಾಥ ಪೂಜಾರಿಯವರು ಮಾತನಾಡುತ್ತಾ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲು ೧೫೦ ಕ್ಕೂ ಅಧಿಕ ಜಾಗವಿರುವ ಏಕೈಕ ಜಿಲ್ಲೆ ಇದಾಗಿದ್ದು, ವಿದ್ಯಾರ್ಥಿ ಯುವಕರು ಇದರ ವಿರುದ್ದ ಗಟ್ಟಿ ದ್ವನಿಯಾಗಬೇಕು. ಒಂದು ವೇಳೆ ಖಾಸಗಿಯವರಿಗೆ ಅವಕಾಶ ಕೊಟ್ಟರೆ ಜಿಲ್ಲಾ ಬಂದ್ ಗೆ ಕರೆ ಕೊಡಬೇಕಾಗುತ್ತದೆ ಎಂದರು. ಕೆ ಎಫ್ ಅಂಕಲಗಿ ಯವರು ಮಾತನಾಡುತ್ತಾ ಈ ಹಿಂದೆ ಧರ್ಮಸಿಂಗ್ ಮುಖ್ಯಮಂತ್ರಿಯಾಗಿದ್ದಾಗಲೇ ಸರ್ಕಾರಿ ವೈದ್ಯಕೀಯ ಕಾಲೇಜು ಅಸ್ತು ಎಂದಿದ್ದರು. ಈಲ್ಲೆಯ ಖಾಸಗಿ ಆಸ್ಪತ್ರೆಯವರಯ ಜಿಲ್ಲಾಸ್ಪತ್ರೆಯನ್ನು ಬಳಸಿಕೊಂಡು ಸ್ವತಂತ್ರವಾಗಿ ಬೆಳೆದು ನಿಂತಿದೆ. ರಾಜ್ಯದಲ್ಲಿ ಮಾದರಿ ಆಸ್ಪತ್ರೆ ಎಂದು ಹೆಸರಾಗಿರುವ ವಿಜಯಪುರ ಜಿಲ್ಲೆಗೆ ಕೂಡಲೇ ವೈದ್ಯಕೀಯ ಕಾಲೇಜು ಆರಂಭಿಸಬೇಕು ಎಂದು ಒತ್ತಾಯಿಸಿದರು. ಅಕ್ರಮ ಮಾಷಳಕರ ರವರು ಮಾತನಾಡುತ್ತಾ ನಾಳೆ ಆಲಮಟ್ಟಿಯಲ್ಲಿ ರಾಜ್ಯದ ಮುಖ್ಯಮಂತ್ರಿಯವನ್ನು ಭೇಟಿ ಮಾಡಿ ಮಾತನಾಡುತ್ತಿದ್ದೇವೆ. ಯಾವುದೇ ಕಾರಣಕ್ಕು ಖಾಸಗೀಯ ಸಹಭಾಗಿತ್ವಕ್ಕೆ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅವಕಾಶ ಮಾಡಿಕೊಡಬೇಡಿ ಎಂದು ಮನವಿ ಕೊಡುತ್ತಿದ್ದೇವೆ ಎಂದು ಹೇಳಿದರು.
ಈ ಗೋಷ್ಠಿಯಲ್ಲಿ ಸಂಚಲನಾ ಸಮಿತಿ ಸದಸ್ಯರಾದ ಅನಿಲ ಹೊಸಮನಿ, ಲಲಿತಾ ಬಿಜ್ಜರಗಿ, ಮಲ್ಲಿಕಾರ್ಜುನ ಬಟಗಿ, ಸುರೇಶ ಜೆ.ಬಿ. ಸಿ.ಬಿ ಪಾಟೀಲ, ಬಾಬುರಾವ್ ಬೀರಕಬ್ಬಿ, ಲಕ್ಷö್ಮಣ ಹಂದ್ರಾಳ, ಭರತಕುಮಾರ ಹೆಚ್ ಟಿ, ಚಂದ್ರಶೇಖರ ಗಂಟೆಪ್ಪಗೋಳ, ದಸ್ತಗೀರ ಉಕ್ಕಲಿ, ಶ್ರೀಕಾಂತ ಕೊಂಡಗೂಳಿ, ಗೀತಾ ಹೆಚ್, ಸಿದ್ರಮಯ್ಯ ಹಿರೇಮಠ, ಚನ್ನು ಕಟ್ಟಿಮನಿ, ಜಗದೇವ ಸರ‍್ಯವಂಶಿ,ಮಹಾದೇವ ಬನಸೋಡೆ, ವಿದ್ಯಾವತಿ ಅಂಕಲಗಿ ಮುಂತಾದವರು ಗೋಷ್ಠಿಯಲ್ಲಿ ಭಾಗವಹಿಸಿದ್ದರು.


















