ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮ ವೀಕ್ಷಣೆ ಸಂಸದ ಜಗದೀಶ್ ಶೆಟ್ಟರ್
ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ: ಪಟ್ಟಣದ ನಡಹಳ್ಳಿಯವರ ಫಾರ್ಮ್ ಹೌಸ್‌ನಲ್ಲಿ ಮಾಜಿ ಮುಖ್ಯಮಂತ್ರಿ ಹಾಲಿ ಸಂಸದ
ಜಗದೀಶ ಶೆಟ್ಟರ್ ಅವರು ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮ ವೀಕ್ಷಣೆ ಮಾಡಿದರು.
ಈ ವೇಳೆ ಮಾಜಿ ಬಿಜೆಪಿ ಹಿರಿಯ ಮುಖಂಡ ಪ್ರಭು ಕಡಿ, ಮಾಜಿ ಡಿಡಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಿರಾದಾರ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಜಗದೀಶ್ ಪಂಪಣ್ಣವರು, ಬಿಜೆಪಿ ರೈತ ಮೋರ್ಚಾ ತಾಲ್ಲೂಕು ಅಧ್ಯಕ್ಷ ಎಸ್ ಎಸ್ ಶಿವಣಗಿ(ಕಂದಗನೂರ), ಡಾ ವಿರೇಶ ಪಾಟೀಲ,ಬಿಜೆಪಿ ಯುವ ಮೋರ್ಚಾ ತಾಲ್ಲೂಕು ಅಧ್ಯಕ್ಷ ಗಿರೀಶಗೌಡ ಪಾಟೀಲ ಹಿರೇಮುರಾಳ, ಶ್ರೀ ಶೈಲ್ ರೂಡಗಿ, ಶ್ರೀಕಾಂತ್ ಹಿರೇಮಠ, ಸಂಗನಗೌಡ ಪಾಟೀಲ,ಅಶೋಕ ರಾಠೋಡ,ಸಂಜು ಬಾಗೇವಾಡಿ,ಅನಿಲ ರಾಠೋಡ,ನಾಗೇಶ ಕವಡಿಮಟ್ಟಿ ಸೇರಿದಂತೆ ಉಪಸ್ಥಿತರಿದ್ದರು.