ಒಣ ಬೇಸಾಯಕ್ಕೆ ₹50 ಸಾವಿರ ಹಾಗೂ ನೀರಾವರಿ ಭೂಮಿಗೆ ₹1 ಲಕ್ಷ ರೂಪಾಯಿ ಪರಿಹಾರ ನೀಡಲು ಆಗ್ರಹ..!
ವಿಜಯಪುರ : ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಪ್ರತಿ ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಎಲ್ಲ ಬೆಳೆಗಳು ಸಂಪೂರ್ಣ ನೀರಲ್ಲಿ ನಿಂತು ಹಾಳಾಗಿವೆ . ಜಂಟಿ ಸಮೀಕ್ಷೆ ನೆಪದಲ್ಲಿ ಯಾವುದೇ ಸಮಯವನ್ನು ಹಾಳು ಮಾಡದೆ ತಾಲೂಕಿನ ಪ್ರತಿಯೊಂದು ಗ್ರಾಮದ ಪ್ರತಿಯೊಬ್ಬ ರೈತರಿಗೂ ಒಣ ಬೇಸಾಯಕ್ಕೆ 50,000 ಹಾಗೂ ನೀರಾವರಿ ಭೂಮಿಗೆ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಕೊಡಬೇಕೆಂದು ಈ ಮೂಲಕ ಜಿಲ್ಲಾಡಳಿತಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದೇವೆ ಎಂದು ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಅಗ್ರಹ ಮಾಡಿದರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ದೇವರ ಹಿಪ್ಪರಗಿ ತಾಲೂಕು ದಂಡಧಿಕಾರಿಗಳಾದ ಪ್ರಕಾಶ ಸಿಂದಗಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ವಿಪರೀತ ಮಳೆಯಿಂದಾಗಿ ತಾಲೂಕಿನ ಕೃಷಿ ಬೆಳೆಗಳಾದ ತೊಗರಿ ಹತ್ತಿ ಮೆಕ್ಕೆಜೋಳ ಸಜ್ಜಿ ಸೇರಿದಂತೆ ಸಮಸ್ತ ಬೆಳೆಗಳು ಹಾಳಾಗಿವೆ ದ್ರಾಕ್ಷಿ ದಾಳಿಂಬ್ರಿ ಲಿಂಬೆ, ಬಾಳೆ ಸೇರಿದಂತೆ ಎಲ್ಲ ಬೆಳೆಗಳಲ್ಲಿ ನೀರು ನಿಂತು ಹಾಳಾಗಿವೆ ಆದ್ದರಿಂದ ಯಾವುದೇ ಜಂಟಿ ಸಮೀಕ್ಷೆ ವೈಮಾನಿಕ ಸಮೀಕ್ಷೆ ಎಂದು ನೆಪ ಹೇಳದೆ 15 ದಿನದ ಒಳಗಾಗಿ ಜಿಲ್ಲೆಯ ಎಲ್ಲರಿಗೂ ಪರಿಹಾರ ಬರಲೇಬೇಕೆಂದು ಒತ್ತಾಯ ಮಾಡಲಾಯಿತು
ತಾಲೂಕ ಅಧ್ಯಕ್ಷರಾದ ಈರಪ್ಪ ಕುಳೆಕುಮಟಗಿ ಅವರು ಮಾತ್ನಾಡುತ್ತಾ ಭೀಮೆ, ಕೃಷ್ಣಾ ಹಾಗೂ ದೋಣಿಯ ಪ್ರವಾಹದಿಂದಾಗಿ ಸಾಕಷ್ಟು ರೈತರ ಕೃಷಿ ಭೂಮಿಗಳ ಬೆಳೆಗಳು ಹಾಳಾಗಿರುವ ಜೊತೆಗೆ ಮನೆ ಮಠಗಳು ಕೂಡ ಬಿದ್ದಿರುವ ಉದಾಹರಣೆಗಳಿವೆ ಜೊತೆಗೆ ಹಲವಾರು ಪ್ರಾಣಿಗಳು ಕೂಡ ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ ಇದಕೆಲ್ಲ ಪರಿಹಾರ ನೀಡಬೇಕೆಂದು ಆಗ್ರಹ ಮಾಡುತ್ತಿದ್ದೇವೆ ಒಂದು ವೇಳೆ ತಡವಾದರೆ ಉಗ್ರ ಹೋರಾಟ ಮಾಡಲಾಗುವುದು ಎಂದರು.ಹಿರಿಯರಾದ ಬಸಗೊಂಡಪ್ಪ ಉಮ್ರಾಣಿ ಅವರು ಮಾತನಾಡುತ್ತಾ ದೇವರ ಹಿಪ್ಪರಗಿ ತಾಲೂಕಿನ ಎಲ್ಲಾ ರೈತರ ಜಮೀನಿನ ಸಮಸ್ತ ಬೆಳೆಗಳು ಕೂಡ ನಷ್ಟಗೊಂಡಿರುವ ಹಿನ್ನೆಲೆಯಲ್ಲಿ ಯಾರಿಗೂ ತಾರತಮ್ಯ ಮಾಡದೆ ಎಲ್ಲರಿಗೂ ನಷ್ಟ ಪರಿಹಾರವನ್ನು ಹಾಕಬೇಕು ಅದೇ ರೀತಿಯಾಗಿ ಫಸಲು ಭೀಮಾ ಯೋಜನೆಯ ವಿಮೇವೂ ಕೂಡ ಆದಷ್ಟು ಬೇಗನೆ ಕೊಡಬೇಕೆಂದರು.
ಈ ವೇಳೆ ಜಿಲ್ಲಾ ಕಾರ್ಯಾಧ್ಯಕ್ಷರಾದ ಪ್ರಕಾಶ ತೇಲಿ, ದೇವರಹಿಪರಗಿ ತಾಲೂಕ ಗೌರವಾಧ್ಯಕ್ಷರಾದ ಶಿವಾನಂದಯ ಹಿರೇಮಠ ಮಹಿಳಾ ಘಟಕದ ಅಧ್ಯಕ್ಷರಾದ ಗಿರಿಜಾ ಮೈತ್ರಿ, ಸುನಂದ ಸೊನ್ನಳ್ಳಿ, ಅಂಬವ್ವ ಬಿರಾದಾರ, ಎಂ ಡಿ ಮನಹಳ್ಳಿ, ರಮೇಶ್ ಚಾಂದಕವಟಗಿ, ಸಂಗಪ್ಪಗೌಡ ಬಿರಾದಾರ, ಶಿವಪ್ಪ ತಾಳಿಕೋಟಿ, ಮಹಾಂತಪ್ಪ ಸುಂಬಡ, ಕಾಶೀನಾಥ ಬಿರಾದಾರ್ ಪುಜಪ್ಪ ಗುಡ್ಡಳ್ಳಿ,ಅಶೋಕ್ ಬಿರಾದಾರ,ಸಿದ್ದಪ್ಪ ಪೂಜಾರಿ,ಶಿವಶಂಕರ ಬಿರಾದಾರ,ಶಿಖಂದರ್ ತೋನಶ್ಯಾಳ, ಬಸಗೊಂಡ ಉಮ್ರಾಣಿ, ಸೇರಿದಂತೆ ನೂರಾರು, ರೈತರು ಇದ್ದರು