ಅಣಕು ನ್ಯಾಯಾಲಯ ಸ್ಪರ್ಧೆ..!
ವಿಜಯಪುರ: ಅಣಕು ನ್ಯಾಯಾಲಯ ಸ್ಪರ್ಧೆಗಳು ಕಾನೂನು ವಿದ್ಯಾರ್ಥಿಗಳಿಗೆ ವೃತ್ತಿಕೌಶಲ್ಯ ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತವೆ ಎಂದು ಅಂಜುಮನ್ ಕಾನೂನು ಕಾಲೇಜಿನ ಪ್ರಾಧ್ಯಾಪಕಿ ಉಜ್ವಲಾ ಸರನಾಡಗೌಡ ಹೇಳಿದ್ದಾರೆ.
ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಮಹಾವಿದ್ಯಾಲಯದಲ್ಲಿ ಗುರುವಾರ ನಡೆದ ಅಂತರ ತರಗತಿ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಅವರು ನ್ಯಾಯಾಧೀಶರಾಗಿ ಪಾಲ್ಗೋಂಡು ಮಾತನಾಡಿದರು.
ಈ ಅಣಕು ನ್ಯಾಯಾಲಯ ಅಚ್ಚುಕಟ್ಟಾಗಿ ಆಯೋಜಿಸಲಾಗಿದೆ. ಕಾನೂನು ವಿದ್ಯಾರ್ಥಿಗಳು ಹೆಚ್ಚೆಚ್ಚು ಇಂಥ ಸ್ಪರ್ಧೆಗಳಲ್ಲಿ ಪಾಲ್ಗೋಳ್ಳಬೇಕು ಎಂದು ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ಪಾಲ್ಗೋಂಡಿದ್ದ ಅಂಜುಮನ್ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಪ್ರದೀಪ ಸಂಕದ ಮಾತನಾಡಿ, ಕಾನೂನು ವಿದ್ಯಾರ್ಥಿಗಳು ನಿರಂತರವಾಗಿ ಅಧ್ಯಯನಶೀಲರಾಗಿರಬೇಕು. ಕಾನೂನಿನಲ್ಲಿ ಆಗುವ ತಿದ್ದುಪಡಿಗಳತ್ತ ಗಮನ ಹರಿಸಬೇಕು. ಈ ಮೂಲಕ ವೃತ್ತಿಕೌಶಲ್ಯ ವೃದ್ಧಿಸಿಕೊಳ್ಳಬೇಕು ಎಂದು ಹೇಳಿದರು.
ಕಾನೂನು ಮಹಾವಿದ್ಯಾಲಯದ ಡೀನ್ ಮತ್ತು ಪ್ರಾಚಾರ್ಯ ಡಾ. ರಘುವೀರ ಜಿ. ಕುಲಕರ್ಣಿ ಅಣುಕು ಶಾಲೆ ಸ್ಪರ್ಧೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಈ ಸ್ಪರ್ಧೆಯಲ್ಲಿ ನಾಲ್ಕು ತಂಡಗಳು ಭಾಗವಹಿಸಿದ್ದವು. 1 ಮತ್ತು 2ನೇ ವರ್ಷದ ಬಿ. ಎ ಎಲ್. ಎಲ್. ಬಿ, ಹಾಗೂ 2ನೇ ವರ್ಷದ ಎಲ್‌ಎಲ್‌ಬಿ ವಿದ್ಯಾರ್ಥಿಗಳ ತಂಡಗಳು ಈ ಸ್ಪರ್ಧೆಯಲ್ಲಿ ಪಾಲ್ಗೋಂಡು ವಾದದ ಕೌಶಲ್ಯವನ್ನು ಪ್ರದರ್ಶಿಸಿದವು.
ಈ ಸ್ಪರ್ಧೆಯಲ್ಲಿ 2ನೇ ವರ್ಷದ ಎಲ್.ಎಲ್.ಬಿ ವಿದ್ಯಾರ್ಥಿಗಳಾದ ಉತ್ತಮ ಕಾಂಬಳೆ, ಅಫ್ರೀನ್ ಖಾಜಿ ಹಾಗೂ ಸುನಿಲ ಅವರನ್ನೊಳಗೊಂಡ ತಂಡ ಪ್ರಥಮ ಸ್ಥಾನ ಪಡೆಯಿತು. 2ನೇ ವರ್ಷದ ಎಲ್‌ಎಲ್‌ಬಿ ವಿದ್ಯಾರ್ಥಿಗಳಾದ ಗುರುರಾಜ ಇಟಗಿ, ಪ್ರಗತಿ ಹಾಗೂ ಸರಸ್ವತಿ ಪೂಜಾರಿ ಅವರನ್ನೊಳಗೊಂಡ ತಂಡ ದ್ವಿತೀಯ ಸ್ಥಾನವನ್ನು ಪಡೆಯಿತು.
ಪುರುಷರ ವಿಭಾಗದ ಉತ್ತಮ ವಾದಿ ಪ್ರಶಸ್ತಿಯನ್ನು ಎಲ್.ಎಲ್.ಬಿ 2ನೇ ವರ್ಷದ ವಿದ್ಯಾರ್ಥಿ ಉತ್ತಮ ಕಾಂಬಳೆ ಮತ್ತು ಮಹಿಳಾ ವಿಭಾಗದ ಪ್ರಶಸ್ತಿಯನ್ನು ಎಲ್.ಎಲ್.ಬಿ 2ನೇ ವರ್ಷದ ವಿದ್ಯಾರ್ಥಿನಿ ಅಫ್ರೀನ್ ಖಾಜಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಹಾಗೂ ಕಾನೂನು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



















