ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ
ವಿಜಯಪುರ ಅ.23 : ಸ್ವಾತಂತ್ರö್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ ಅವರು ತೋರಿದ ಧೈರ್ಯ, ಶೌರ್ಯ ಹಾಗೂ ಸಾಹಸ ನಮ್ಮೆಲ್ಲರಿಗೂ ಪ್ರೇರಣೆಯ ಜೊತೆಗೆ ಸ್ಫೂರ್ತಿದಾಯಕವಾಗಿದೆ ಎಂದು ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮAದಿರದಲ್ಲಿ ಗುರುವಾರ ನಡೆದ ಕಿತ್ತೂರ ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ರಾಣಿ ಚನ್ನಮ್ಮ ಅವರ ಸಾಹಸಮಯ ಯಶೋಗಾಥೆಯನ್ನು ಮುಂದಿನ ಜನಾಂಗಕ್ಕೆ ತಿಳಿಸಿಕೊಡುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಭಾಷಣ, ಕ್ವಿಜ್, ಪ್ರಬಂಧ ಸ್ಪರ್ಧೆ ಏರ್ಪಡಿಸಬೇಕು. ಅವರ ಆದರ್ಶಮಯ ಜೀವನ ನಮ್ಮೆಲ್ಲರಿಗೂ ದಾರಿದೀಪವಾಗಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಮಾತನಾಡಿ, ಬಲಿಷ್ಠ ಬ್ರಿಟಿಷ್ ಸೈನ್ಯದ ವಿರುದ್ಧ ಯುದ್ದ ಕಹಳೆ ಸಾರಿ ಜಯ ಸಾಧಿಸಿದ ಕಿತ್ತೂರು ರಾಣಿ ಚನ್ನಮ್ಮರ ಜೀವನಾದರ್ಶ ಮಹಿಳೆಯರಿಗೆ ಸ್ಫೂರ್ತಿದಾಯಕವಾಗಿದೆ. ಅವರ ಸಾಹಸಮಯ ಹೋರಾಟ ಅನೇಕ ಕಷ್ಟಗಳು ಎದುರಾದಾಗಲೂ ಕುಗ್ಗದೆ ಬ್ರಿಟಿಷರ ವಿರುದ್ಧ ಹೋರಾಡಿ ಸಾಹಸ ಮೆರೆದ ವೀರ ರಾಣಿ ಚನ್ನಮ್ಮ ಅವರ ಸಾಹಸಮಯ ಜೀವನ ಇಂದಿನ ಜನಾಂಗಕ್ಕೆ ಪ್ರೇರಣಾದಾಯಕವಾಗಿದೆ. ಅತ್ಯಂತ ಕಷ್ಟಕರ ಹಾಗೂ ಕ್ಲಿಷ್ಟಕರ ಸಂದರ್ಭದಲ್ಲೂ ಎಂತಹ ಕಠಿಣ ಪರಿಸ್ಥಿತಿಯನ್ನು ಮೆಟ್ಟಿ ನಿಂತು ಅದನ್ನು ನಿಭಾಯಿಸುವ ಛಾತಿ-ಧೈರ್ಯ ಇಂದಿನ ಯುವ ಜನಾಂಗ ರೂಢಿಸಿಕೊಳ್ಳಲು ಕಿತ್ತೂರ ರಾಣಿ ಚೆನ್ನಮ್ಮ ಅವರ ಜೀವನ ಸೂರ್ತಿಯ ಸೆಲೆಯಾಗಿದೆ.
ಇವರ ಜೀವನದ ವಿಚಾರಗಳನ್ನು ಅರಿತುಕೊಂಡು ಎದುರಾಗುವ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಗುರಿ ಸಾಧನೆಗೆ ಇಂದಿನ ಯುವಕರು ಸಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಹೋರಾಡಿದ ಚೆನ್ನಮ್ಮ ಅವರ ದಿಟ್ಟತನ ಸಾಹಸ, ಶೌರ್ಯ ಅಪ್ರತಿಮವಾದದ್ದು,ಹಿಡಿದ ಕಾರ್ಯ ಸಾಧಿಸಲು ಚೆನ್ನಮ್ಮ ಅವರ ಬದುಕಿನ ಹಲವು ವಿಚಾರಗಳು ನಾವು ಮೈಗೂಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಮಾತನಾಡಿ ಬ್ರೀಟಿಷರ ವಿರುದ್ಧ ಧೈರ್ಯದಿಂದ ಹೋರಾಡಿದ ಕಿತ್ತೂರ ರಾಣಿ ಚೆÀನ್ನಮ್ಮ ಬ್ರಿಟಿಷ ಸಾಮ್ರಾಜ್ಯಕ್ಕೆ ಸಿಂಹ ಸ್ವಪ್ನವಾಗಿದ್ದರು. ಚೆನ್ನಮ್ಮರ ಸಾಹಸ, ಜೀವನ, ಛಲ, ದೃಢ ನಿರ್ಧಾರ ಮಹಿಳೆಯರಿಗೆ ಪ್ರೇರಣೆಯಾಗಿವೆ ಎಂದು ಹೇಳಿದರು.
ಪ್ರಕಾಶ ಎನ್. ನರಗುಂದ ಅವರು ವಿಶೇಷ ಉಪನ್ಯಾಸ ನೀಡಿ, 1778ರಲ್ಲಿ ಅಕ್ಟೋಬರ್ 23ರಂದು ಬೆಳಗಾವಿಯ ಕಾಕತಿಯಲ್ಲಿ ಜನಿಸಿದ ಕಿತ್ತೂರ ರಾಣಿ ಚೆನ್ನಮ್ಮ ಅವರು ತಂದೆ ಧೂಳಪ್ಪಗೌಡರಿಂದ ಯುದ್ಧ ಪರಿಣಿತಿಯನ್ನು ಕರಗತ ಮಾಡಿಕೊಂಡಿದ್ದರು. ನಾಡಿನ ರಕ್ಷಣೆಗಾಗಿ ಪರಕೀಯರ ದಾಸ್ಯದ ವಿರುದ್ಧ ಹೋರಾಡಿ ಇತಿಹಾಸದ ಪುಟಗಳಲ್ಲಿ ಅಜರಾಮರವಾಗಿದ್ದಾರೆ. ಲಾವಣಿ, ಜನಪದ ನಾಟಕಗಳ ಮೂಲಕ ಇವರ ಯಶೋಗಾಥೆ ಹಾಗೂ ಹೋರಾಟದ ಬದುಕಿ ಚಿತ್ರಣ ಜನಮಾನಸÀದಲ್ಲಿ ಜನಜನಿತವಾಗಿವೆ ಎಂದು ಅವರು ಹೇಳಿದರು.
ಬಿ.ಎಂ. ಪಾಟೀಲ ಅವರು ಮಾತನಾಡಿ ಅವರು ರಾಣಿ ಚೆನ್ನಮ್ಮ ಅವರು ಬಾಲ್ಯದಿಂದಲೇ ಬಿಲ್ವಿದ್ಯೆ, ಕುದುರೆ ಸವಾರಿ, ಕತ್ತಿವರಸೆಯಂತಹ ಸಮರಕಲೆಗಳ ಬಗ್ಗೆ ತಿಳಿದುಕೊಂಡಿದ್ದರು. .ಚೆನ್ನಮ್ಮ ತಾಯ್ನಾಡಿನ ರಕ್ಷಣೆಗೆ ಬ್ರಿಟಿಷÀರು ನೀಡಿದ ಸಂಕಷ್ಟದ ಸರಮಾಲೆಗಳನ್ನು ದಿಟ್ಟತನದಿಂದ ಎದುರಿಸಿ ಹೋರಾಡಿದ ಧೀರ ಮಹಿಳೆ. ದೇಶ ರಕ್ಷಣೆಗಾಗಿ ತಮ್ಮ ಜೀವನ ಮುಡಿಪಾಗಿಟ್ಟು ಹಗಲಿರುಳು ದುಡಿದ ಮಹನೀಯರ ಸ್ಮರಣೆ ಹಾಗೂ ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು ಎಂದು ಅವರು ಹೇಳಿದರು. ಗೀತಾ ಕುಲಕರ್ಣಿ ಅವರು ಸುಗಮ ಸಂಗೀತ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮಣ್ಣ ಹಟ್ಟಿ, ಕ್ರೀಡಾಧಿಕಾರಿ ರಾಜಶೇಖರ ಧೈವಾಡಿ, ಪಾಲಿಕೆಯ ಆರೋಗ್ಯಾಧಿಕಾರಿ ಸಂಗಣ್ಣ ಲಕ್ಕಣ್ಣವರ ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ, ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಅಶೋಕ ಘೋಣಸಗಿ, ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಸುರೇಶ ಸೇಡಸ್ಯಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಸಮಾಜದ ಮುಖಂಡರಾದ ಬೆ.ಎಸ್.ಪಾಟೀಲ, ಬಿ.ಎಸ್ ಬಿರಾದಾರ, ಎನ್.ಎಮ.ಬಿರಾದಾರ, ರಾಜಯಘೌಡ, ಗುರುಶಾಂತ ನಿಡೋಣಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಭವ್ಯ ಮೆರವಣಿಗೆ: ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಕಿತ್ತೂರ ರಾಣಿ ಚೆನ್ನಮ್ಮ ಅವರ ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಚಾಲನೆ ನೀಡಿದರು. ವಿವಿಧ ಕಲಾ ತಂಡಗಳಿಂದ ಸಾಗಿದ ಮೆರವಣಿಗೆಯು ಗಾಂಧಿ ವೃತ್ತದಿಂದ ಸಾಗಿ, ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಸಮಾವೇಶಗೊಂಡಿತು.
ಮನಗೂಳಿಯ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ,ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪುಂಡಲಿಕ ಮಾನವರ, ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳಾದ ಜಿ.ಎಸ್.ಕಾಂಬ್ಳೆ ಬಿ,.ಎಂ ಪಾಟೀಲ ಸೇರಿದಂತೆ ವಿವಿಧ ಸಮಾಜದ ಮುಖಂಡರು, ಸಾರ್ವಜನಿಕರು ಇದ್ದರು.