ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ
ವಿಜಯಪುರ,ನ.10 : ನಗರದ ಜಿಲ್ಲಾ ಪಂಚಾಯತಿ ರಸ್ತೆಯಲ್ಲಿರುವ ಉಪ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಸೋಮವಾರ ದಿಢೀರ ಭೇಟಿ ನೀಡಿ,ಕಚೇರಿ ಕಾರ್ಯ ವೈಖರಿ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು ಕಚೇರಿ ಕಾರ್ಯನಿರ್ವಹಣೆ ಕುರಿತು ಮಾಹಿತಿ ನೀಡಿದರು.



















