ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವಿಜಯಪುರಕ್ಕೆ ಅನೀರಿಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ
ವಿಜಯಪುರ: ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ. ನಗರದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಅನೀರಿಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಸಮಿತಿಯ ಮಾರುಕಟ್ಟೆ ಪ್ರಾಂಗಣದಲ್ಲಿ ನಡೆಯುವ ಕೃಷಿ ಉತ್ಪನ್ನಗಳ ವ್ಯಾಪಾರ ವಹಿವಾಟು ಪರಿಶೀಲನೆ ನಡೆಸಿದ ಅವರು, ಪ್ರಾಂಗಣದಲ್ಲಿ ನಡೆಯುತ್ತಿರುವ ಹತ್ತಿ ಉತ್ಪನ್ನದ ಆನ್‌ಲೈನ್ ಟ್ರೇಡಿಂಗ್ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ವ್ಯಾಪಾರಸ್ಥರ ಅಂಗಡಿಗಳಿಗೆ ಭೇಟಿ ನೀಡಿ ಅಲ್ಲಿದ್ದ ರೈತರೊಂದಿಗೆ ಸಮಾಲೋಚನೆ ನಡೆಸಿ, ಕೃಷಿ ಉತ್ಪನ್ನಗಳಿಗೆ ಯೋಗ್ಯ ದರಗಳು ದೊರೆಯುತ್ತಿರುವ ಕುರಿತಾಗಿ ತಿಳಿದುಕೊಂಡರು.ಪ್ರಾಂಗಣದಲ್ಲಿ ಸಮಿತಿಯ ವತಿಯಿಂದ ಒದಗಿಸಲಾಗಿರುವ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ಹತ್ತಿ ವ್ಯಾಪಾರ ವಹಿವಾಟಿನ ಸಂದರ್ಭ ಇರುವುದರಿಂದ ಸಮಿತಿ ವತಿಯಿಂದ ಸುರಕ್ಷೆಯ ದೃಷ್ಟಿಯಿಂದ ನಿಯೋಜಿಸಿರುವ ಅಗ್ನಿಶಾಮಕ ದಳದ ವಾಹನ ಹಾಗೂ ಇ-ಟೆಂಡರ್ ವ್ಯವಸ್ಥೆ ಪರಿಶೀಲಿಸಿ, ಈ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಉತ್ಪನ್ನದ ಕುರಿತಾಗಿ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲಾ ಟಾಸ್ಕ ಪೋರ್ಸ ಸಮಿತಿ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರಾದ ಶಿವಾನಂದ ಪಿ ಗೋಠೆ, ಸಮಿತಿಯ ಕಾರ್ಯದರ್ಶಿಗಳಾದ ಅಲ್ಲಾಭಕ್ಷ ಬಿಜಾಪುರ ಇವರು ಹಾಜರಿದ್ದು ಸಮಿತಿ ಕಾರ್ಯ ಕಲಾಪಗಳ ಮಾಹಿತಿ ವಿವರ ನೀಡಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.



















