ಮುದ್ದೇಬಿಹಾಳ: ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರವು ಸುತ್ತಮುತ್ತಲ ಗ್ರಾಮೀಣ ಪ್ರದೇಶಗಳ ಸಾವಿರಾರು ಜನರಿಗೆ ಜೀವಾಳವಾಗಿ ಕಾರ್ಯನಿರ್ವಹಿಸುತ್ತಿದೆ. ಇಂತಹ ಮಹತ್ವದ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರಾದ ಡಾ. ರಂಗನಾಥ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡುವ ಪ್ರಸ್ತಾವನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶವಾಗಿದೆ ಎಂದು ನವ ಕರ್ನಾಟಕ ರಾಜ್ಯ ಭ್ರಷ್ಟಾಚಾರ ನಿರ್ಮೂಲನ ವೇದಿಕೆಯ ತಾಲೂಕ ಅಧ್ಯಕ್ಷ ಮೆಹಿಬೂಬ್ ಕುಳಗೇರಿ ಹೇಳಿದರು.
ಡಾ. ರಂಗನಾಥ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಿಂದ ವರ್ಗಾವಣೆ ಮಾಡಿದರೆ ಈ ಭಾಗದ ಜನರಿಗೆ ಅನ್ಯಾಯವಾಗುತ್ತದೆ. ಸರ್ಕಾರ ಈ ನಿರ್ಧಾರವನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು, ವೈದ್ಯ ಡಾ. ರಂಗನಾಥ ಅವರು ಕಳೆದ ಮೂರು ತಿಂಗಳಿಗೂ ಅಧಿಕ ಅವಧಿಯಿಂದ ನಾಲತವಾಡದಲ್ಲಿ ಸೇವೆ ಸಲ್ಲಿಸುತ್ತಿದ್ದು, ಬಡವರು, ರೈತರು, ಮಹಿಳೆಯರು ಹಾಗೂ ಹಿರಿಯ ನಾಗರಿಕರಿಗೆ ನಿರಂತರ, ನಿಷ್ಠಾವಂತ ಹಾಗೂ ಮಾನವೀಯ ಚಿಕಿತ್ಸೆ ನೀಡುತ್ತಿದ್ದಾರೆ. ರಾತ್ರಿ–ಹಗಲು ಎನ್ನದೆ ತುರ್ತು ಸಂದರ್ಭಗಳಲ್ಲಿ ಲಭ್ಯರಾಗುವ ಅವರ ಸೇವೆಯಿಂದ ಸಮುದಾಯ ಆರೋಗ್ಯ ಕೇಂದ್ರದ ಮೇಲೆ ಜನರ ನಂಬಿಕೆ ಗಟ್ಟಿಯಾಗಿದೆ. ಇಂತಹ ನಿರ್ಧಾರ ಸರ್ಕಾರದ ಸಂವೇದನಾಶೀಲತೆಯ ಕೊರತೆಯನ್ನು ತೋರಿಸುತ್ತದೆ ಎಂದು ನವ ಕರ್ನಾಟಕ ರಾಜ್ಯ ಭ್ರಷ್ಟಾಚಾರ ನಿರ್ಮೂಲನ ವೇದಿಕೆಯ ತಾಲೂಕ ಅಧ್ಯಕ್ಷ ಮೆಹಬೂಬ್ ಕುಳಗೇರಿ ಅವರು ಸರಕಾರ ಒಂದೇ ವೇಳೆ ವರ್ಗಾವಣೆ ಮಾಡದಿದ್ದರೆ ಉಗ್ರವಾದ ಹೋರಾಟ ಎಚ್ಚರಿಕೆ ನೀಡಿದ್ದಾರೆ.