ಜ.25ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆ
ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾದಿಕಾರಿ ಡಾ.ಆನಂದ.ಕೆ ಆದೇಶ
ವಿಜಯಪುರ, ಜ.22 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ) ವತಿಯಿಂದ ಜಿಲ್ಲೆಯ 27 ಪರೀಕ್ಷಾ ಕೇಂದ್ರಗಳಲ್ಲಿ ಜ.25 ರಂದು ವಿವಿಧ ಇಲಾಖೆ-ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ.
ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಆದೇಶ ಹೊರಡಿಸಿದ್ದಾರೆ.
ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಿ, ಈ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಕೇಂದ್ರಗಳು, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಲಾಗಿದೆ.



















