ವಿಜಯಪುರ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತ ಪತ್ರಕರ್ತ ರಫೀ ಭಂಡಾರಿ ಅಭಿನಂದಾನ ಸಮಿತಿ ವಿಯಯಪುರ ಇವರ ಸಹಯೋಗದಲ್ಲಿ “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ ಮತ್ತು ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ದತ್ತಿನಿ಼ಧಿ ಉಪನ್ಯಾಸ ಸ್ಥಾಪನೆ ಘೋಷಣೆ ಕಾರ್ಯಕ್ರಮವನ್ನು ಇದೇ ದಿ.೨೫ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಮಧುವನ ಹೋಟೆಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಬೆಂಗಳೂರಿನ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಬೆಂಗಳೂರಿನ ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಸೀನ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ.ಆನಂದ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ, ಬೆಂಗಳೂರಿನ ಡೈಲಿ ಸಾಲಾರ್ ದಿನಪತ್ರಿಕೆಯ ಸಂಪಾದಕ ಅಸ್ಜದ್ ನವಾಜ್, ಬೆಂಗಳೂರಿನ ರಾಷ್ಟಿçÃಯ ಸಹಾರಾ ದಿನಪತ್ರಿಕೆಯ ಸಂಪಾದಕ ಎನ್.ಹಮೀದಿ, ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ, ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎ.ಎಂ.ಖಾನ್, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ, ಬಿಎಲ್‌ಡಿಇ ಸಂಸ್ಥೆಯ ಸಾರ್ವಜನಿಕ ಸಂಪಕಾಧಿಕಾರಿ ಡಾ.ಮಹಾಂತೇಶ ಬಿರಾದಾರ, ಭಾಗವಹಿಸಲಿದ್ದು, ಹೈದರಾಬಾದ್ ಮೌಲಾನಾ ಆಜಾದ್ ಉರ್ದು ವಿಶ್ವವಿದ್ಯಾಲಯದ ಪ್ರೊ. ಮುಸ್ತಾಕ್ ಪಟೇಲ್ ಅಭಿನಂದನಾ ನುಡಿಗಳನ್ನಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಜಯಪುರದ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್, ಹಿರಿಯ ಪತ್ರಕರ್ತ ಗೋಪಾಲ ನಾಯಕ್, ಆಲ್ ಅಮೀನ್ ಚಾರಿಟೇಬಲ್ ಫಂಡ್ ಟ್ರಸ್ಟ್ನ ಟ್ರಸ್ಟಿ ರಿಯಾಜ್ ಫಾರೂಕಿ, ಮಹಿಳಾ ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ, ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಸಲಾವುದ್ದೀನ್ ಪುಣೇಕರ್ ಹಾಗೂ ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎ.ಎಸ್.ಪಾಟೀಲ್ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ನಜೀಬ್ ಭಕ್ಷಿ, ವಸೀಮ್ ಭಂಡಾರಿ ಮತ್ತು ಕಲೀಮ ನಾಯಕ ಉಪಸ್ಥಿತರಿರಲಿದ್ದಾರೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ಎಸ್.ಎಂ.ಪಾಟೀಲ್ ಗಣಿಹಾರ ಮತ್ತು ಸಮಿತಿಯ ಉಪಾಧ್ಯಕ್ಷ ಅಶೋಕ ಯಡಹಳ್ಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















