ಜಿಲ್ಲಾ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿಗಳ ಭೇಟಿ; ಗಣರಾಜ್ಯೋತ್ಸವ ಸಿದ್ಧತೆ ಪರಿಶೀಲನೆ
ವಿಜಯಪುರ,ಜ.25 : ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ಭಾನುವಾರ ಸಂಜೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಗಣರಾಜ್ಯೋತ್ಸವ ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿ,ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ,ಅಪರ ಜಿಲ್ಲಾಧಿಕಾರಿಗಳಾದ ಡಾ.ಔದ್ರಾಮ,ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮನಗೌಡ ಹಟ್ಟಿ, ವಿಜಯಪುರ ಉಪವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ,ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ಎಂ.ಎ.ಉಪಾಸೆ, ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ,ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವೀರಯ್ಯ ಸಾಲಿಮಠ,ಆಹಾರ ಇಲಾಖೆಯ ಉಪ ನಿರ್ದೇಶಕರಾದ ವಿನಯ ಕುಮಾರ ಪಾಟೀಲ,ಕ್ರೀಡಾಧಿಕಾರಿ ರಾಜಶೇಖರ್ ಧೈವಾಡಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


















