ಜಿಲ್ಲಾಡಳಿತದಿಂದ ಜ.30ರಂದು ಹುತಾತ್ಮ ದಿನಾಚರಣೆ
ವಿಜಯಪುರ,ಜ.28 : ಜಿಲ್ಲಾಡಳಿತದ ವತಿಯಿಂದ ಇದೇ ಜನವರಿ 30 ರಂದು ನಗರದ ಮೀನಾಕ್ಷಿ ಚೌಕ್‍ನಲ್ಲಿ ಬೆಳಿಗ್ಗೆ 11 ಗಂಟೆಗೆ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
ಕಾರ್ಯಕ್ರಮವನ್ನು ಅರ್ಥಪೂರ್ಣ ಆಚರಣೆ ಹಾಗೂ ಅಚ್ಚುಕಟ್ಟು ನಿರ್ವಹಣೆಗಾಗಿ ಅಗತ್ಯ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ವೇದಿಕೆ ನಿರ್ಮಾಣ, ಕಾರ್ಯಕ್ರಮದ ಇತರ ವ್ಯವಸ್ಥೆ, ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆ, ಬ್ಯಾನರ್ ವ್ಯವಸ್ಥೆ, ಭಜನೆ ವ್ಯವಸ್ಥೆ, ಆಸನ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಹುತಾತ್ಮರ ದಿನವನ್ನು ಪೂರ್ಣ ಪಾವಿತ್ರ್ಯತೆ ಮತ್ತು ಅತ್ಯುತ್ತಮವಾಗಿ ಆಚರಿಸಲು ಭಾರತದ ಸ್ವಾತಂತ್ರ್ಯದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಭಾಷಣ-ಚರ್ಚೆಗಳನ್ನು ಏರ್ಪಡಿಸುವುದು. ಈ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರ ಪಾತ್ರ ಮತ್ತು ರಾಷ್ಟ್ರೀಯ ಐಕ್ಯತೆಯ ಮೂಲ ಉದ್ಧೇಶಗಳ ಕುರಿತು ಸಾಂಸ್ಕøತಿಕ ಕಾರ್ಯಕ್ರಮ ಸೇರಿದಂತೆ ವಿವಿಧ ಅರ್ಥಪೂರ್ಣ ಕಾರ್ಯಕ್ರಮ ಹಮ್ಮಿಕೊಂಡು ಯಶಸ್ವಿಗೊಳಿಸುವುದು, ಮಹಾತ್ಮಾ ಗಾಂಧೀಜಿಯವರ ವೃತ್ತದವರೆಗೆ ಪಾದಯಾತ್ರೆ ಮೂಲಕ ತೆರಳಿ ಗಾಂಧೀಜಿ ಪ್ರತಿಮೆ ಮಾಲಾರ್ಪಣೆ ಮಾಡಲು ನಿರ್ಧರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.



















