ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!
ಸಿಂದಗಿ :ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು,ಸಂಪೂರ್ಣವಾಗಿ ಸುಟ್ಟು ಹೋಗಿದೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಸುಂಗಠಾಣ ಗ್ರಾಮದ ಹಣಮಂತಪ್ಪ ಗುರಲಿಂಗಪ್ಪ ಬಿರಾದಾರ ಉರ್ಫ್ ಕುರನಳ್ಳಿ ಎಂಬುವರಿಗೆ ಸೇರಿದ್ದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು, ಮಂಗಳವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಹೋಗಿದೆ. ಅಂದಾಜು 7 ಲಕ್ಷ ಮೌಲ್ಯದ ಕಬ್ಬು ಹಾನಿಯಾಗಿದೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಸಂಭವಿಸಿದೆ.


















