ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ
ವಿಜಯಪುರ, ಫೆ.25 :ವಿಜಯಪುರ ಉಪವಿಭಾಗದ ವ್ಯಾಪ್ತಿಯಲ್ಲಿ ನೋಂದಣಿಯಾದ ಲೇವಾದೇವಿ, ಗಿರವಿ ಹಾಗೂ ಹಣಕಾಸು ಸಂಸ್ಥೆಗಳು ತಮ್ಮ ಪರವಾನಿಗೆಯನ್ನು ನಿಗದಿತ ಶುಲ್ಕ ಪಾವತಿಸಿ ಇದೇ ಮಾರ್ಚ್ 31ರೊಳಗಾಗಿ ನವೀಕರಣಗೊಳಿಸಿಕೊಳ್ಳುವಂತೆ ಸಹಕಾರ ಸಂಘಗಳ ಸಹಾಯಕ ನಿಬಂಧಕರು ತಿಳಿಸಿದ್ದಾರೆ.
ಈ ಅವಧಿಯಲ್ಲಿ ಪ್ರಸ್ತಾವನೆ ಸಲ್ಲಿಸಲು ತಪ್ಪಿದಲ್ಲಿ, ಕರ್ನಾಟಕ ಲೇವಾದೇವಿ ಕಾಯ್ದೆ ಕಲಂ 7ಎ(4)ರಲ್ಲಿ ನಿರ್ದಿಷ್ಟಪಡಿಸಲಾದ ನವೀಕರಣದ ದರದ ದುಪ್ಪಟ್ಟು ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ಜೊತೆಗೆ ಕಾಯ್ದೆ ಕಲಂ 7ಎ(2)ರ ಪ್ರಕಾರ ವ್ಯವಹಾರದಲ್ಲಿ ತೊಡಗಿಸಿದ ಮೊತ್ತಕ್ಕೆ ಅನುಗುಣವಾಗಿ ಭದ್ರತಾ ಠೇವಣಿಯನ್ನು ಪಾವತಿಸಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ವಿಜಯಪುರ ಉಪ ವಿಭಾಗ ಇವರಿಗೆ ಅರ್ಜಿ ಸಲ್ಲಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



















