ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ವಿಜಯಪುರ, ಫೆ.25 :2025-26ನೇ ಸಾಲಿನ ಹಿಂದುಳಿದ ವರ್ಗಗಳ ಹಾಗೂ ಪ್ರವರ್ಗ-1ರ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ವಿದ್ಯಾರ್ಥಿವೇತನ ಮತ್ತು ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳ ಶುಲ್ಕ ವಿನಾಯಿತಿ ಕಾರ್ಯಕ್ರಮದ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಲಾಗಿದೆ.
ಮಾರ್ಚ್ 5ರವರೆಗೆ ಅವಧಿ ವಿಸ್ತರಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಕೆ ಅವಧಿಯನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಪ್ರಕಟಣೆ ತಿಳಿಸಿದೆ.



















