ದ್ವೀತಿಯ ಪಿಯುಸಿ ಪರೀಕ್ಷೆ ಫೆ-28 ರಿಂದ ಪ್ರಾರಂಭ
ದ್ವಿತೀಯ ಪಿಯು ವೇಳಾಪಟ್ಟಿ
Voice Of JANATA DesK News Bangalore
ಫೆ.28-ಕನ್ನಡ, ಅರೇಬಿಕ್, ಮಾರ್ಚ್ 2-ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ, 3-ಇಂಗ್ಲಿಷ್, 4-ತೆಲುಗು, ತಮಿಳು, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, ಮಲಯಾಳಂ, 5-ಇತಿಹಾಸ, 6-ಭೌತ ವಿಜ್ಞಾನ, 7-ಐಚ್ಛಿಕ ಕನ್ನಡ, ಭೂಗರ್ಭಶಾಸ್ತ್ರ, ವ್ಯವಹಾರ ಅಧ್ಯಯನ, 9-ರಸಾಯನ ವಿಜ್ಞಾನ, ಶಿಕ್ಷಣಶಾಸ್ತ್ರ, ಮೂಲಗಣಿತ, 10-ಅರ್ಥಶಾಸ್ತ್ರ, 11-ತರ್ಕಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗೃಹ ವಿಜ್ಞಾನ, 12-ಹಿಂದಿ, 13-ರಾಜ್ಯಶಾಸ್ತ್ರ, 14-ಲೆಕ್ಕಶಾಸ್ತ್ರ, ಗಣಿತ, 16-ಸಮಾಜ ಶಾಸ್ತ್ರ, ಜೀವ ವಿಜ್ಞಾನ, ಗಣಕ ವಿಜ್ಞಾನ, 17-ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೊಮೊಬೈಲ್, ಹೆಲ್ತ್ಕೇರ್, ಬ್ಯೂಟಿ ಆ್ಯಂಡ್ ವೆಲ್ನೆಸ್.
5,174 ಕಾಲೇಜುಗಳ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ವಿಜ್ಞಾನ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.
1,217 ಪರೀಕ್ಷಾ ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದ್ದು, ಪ್ರತಿ ಪರೀಕ್ಷಾ ಕೇಂದ್ರವೂ ಸಿ.ಸಿ.ಟಿ.ವಿ ಕ್ಯಾಮೆರಾ ಒಳಗೊಂಡಿದೆ. ವಿವಿಧ ಹಂತದ ಅಧಿಕಾರಿಗಳು ವೆಬ್ಕಾಸ್ಟಿಂಗ್ ಮೂಲಕ ಪರೀಕ್ಷಾ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಲಿದ್ದು, ಪರೀಕ್ಷಾ ಕೇಂದ್ರದ ಹೊರಗೂ ಕಟ್ಟುನಿಟ್ಟಿನ ಕಣ್ಣಾವಲಿಗೆ ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಪರೀಕ್ಷಾ ಕೇಂದ್ರದ ಒಳಗೆ ಮೊಬೈಲ್ ಫೋನ್, ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ನಿಷೇಧಿಸಲಾಗಿದೆ. ಹಿಂದಿನ ವರ್ಷದಂತೆ ಈ ಬಾರಿಯೂ ವಸ್ತ್ರಸಂಹಿತೆ ಇರುತ್ತದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶಕ ಗೋಪಾಕೃಷ್ಣ ಮಾಹಿತಿ ನೀಡಿದರು.



















