ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ
ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2026-27ನೇ ಸಾಲಿನ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯತ್ವ ಪಡೆಯಲು ರಾಜ್ಯ ಸಮಿತಿ ನಿರ್ದೇಶನದ ಮೇರೆಗೆ ವಿಜಯಪುರ ಜಿಲ್ಲಾ ಘಟಕದಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯ ಆಯಾ ತಾಲೂಕಿನ ಸದಸ್ಯರು ತಮ್ಮ ತಾಲೂಕಿನ ಅಧ್ಯಕ್ಷರು / ಪ್ರಧಾನ ಕಾರ್ಯದರ್ಶಿ ಮೂಲಕ ಅರ್ಜಿ ಪಡೆದು ಅವರಿಗೇ ಸಲ್ಲಿಸಲು ಈ ಮೂಲಕ ತಿಳಿಸಲಾಗಿದೆ. ವಿಜಯಪುರ ನಗರ ವ್ಯಾಪ್ತಿಯ ಪತ್ರಕರ್ತರು ನಗರದ ಜಿಪಂ ರಸ್ತೆಯ ಪತ್ರಿಕಾ ಭವನದಲ್ಲಿ ಮಾರ್ಚ್ 02 ಸೋಮವಾರದಿಂದ ಪ್ರತಿದಿನ (ಮಾರ್ಚ್ 4 ಬುಧವಾರ ಹೊರತುಪಡಿಸಿ) ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ವರೆಗೆ ಅರ್ಜಿಗಳನ್ನು ಪಡೆಯಲು ಅವಕಾಶವಿದೆ.
ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 8 ಕೊನೆಯ ದಿನವಾಗಿದ್ದು, ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಅರ್ಜಿ ನವೀಕರಣ ಅಥವಾ ನೂತನ ಸದಸ್ಯತ್ವ ಪಡೆಯಲು ಹಿಂದಿನ ವರ್ಷದ ಸಂಘದ ಕಾರ್ಡ್, ಸಂಪಾದಕರು ಅಥವಾ ಮಾಧ್ಯಮ ಸಂಸ್ಥೆಗಳು ನೀಡಿದ ಆದೇಶ ಪ್ರತಿ, ಆಧಾರ್ ಕಾರ್ಡ್, ಎರಡು ಭಾವಚಿತ್ರ ಮತ್ತು 510 ರೂ. ಶುಲ್ಕದೊಂದಿಗೆ ಅರ್ಜಿ ಸಲ್ಲಿಸಬೇಕು.
ತಾಲೂಕು ಮಟ್ಟದಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ಆಯಾ ತಾಲೂಕು ಘಟಕಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಪದಾಧಿಕಾರಿಗಳು ಪರಾಮರ್ಶೆ ನಡೆಸಿ ಮಾ.10ರೊಳಗೆ ಅರ್ಜಿ ಮತ್ತು ಶುಲ್ಕದ ಮೊತ್ತವನ್ನು ಜಿಲ್ಲಾ ಸಮಿತಿಗೆ ರವಾನಿಸಬೇಕು. ಹೊಸದಾಗಿ ಅರ್ಜಿ ಸಲ್ಲಿಸುವವರು ಎಸ್‌ಎಸ್‌ಎಲ್‌ಸಿ ತೇರ್ಗಡೆ ಪ್ರಮಾಣ ಪತ್ರ ಕಡ್ಡಾಯವಾಗಿ ಲಗತ್ತಿಸಬೇಕು. ಜತೆಗೆ ಕನಿಷ್ಠ ಎರಡು ವರ್ಷ ಸೇವಾನುಭವ ಹೊಂದಿರುವ ಕುರಿತು ಸಂಸ್ಥೆಗಳಿಂದ ದೃಢೀಕರಣ ಪತ್ರ ಸಲ್ಲಿಸಬೇಕು.
ಸದಸ್ಯತ್ವ ನೀಡುವ ವಿಚಾರದಲ್ಲಿ ರಾಜ್ಯ ಸಮಿತಿ ಸೂಚಿಸಿದ ಎಲ್ಲ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಮತ್ತು ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಪ್ರಕಾಶ ಬೆಣ್ಣೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



















