ಮಾರ್ಚ್ 17 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ಕಾನೂನು ಸೇವೆಗಳ ಸಮಿತಿಯಿಂದ ಆಯೋಜನೆ.
ಮುದ್ದೇಬಿಹಾಳ: ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಇಲಾಖೆ ಹಾಗೂ ಮುದ್ದೇಬಿಹಾಳದ ವಿವಿಧ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ್ 17, ರಂದು ಮಂಗಳವಾರದಂದು ಬೆಳಿಗ್ಗೆ 10:00 ಗಂಟೆಗೆ ಸ್ಥಳೀಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಧ್ಯಕ್ಷತೆ ಗೌರವಾನ್ವಿತ ಸಚಿನ್ ಕೌಶಿಕ. ಆರ್.ಎನ್. (5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಮತ್ತು ಅಧ್ಯಕ್ಷರು, ತಾಲೂಕಾ ಕಾನೂನು ಸೇವೆಗಳ ಸಮಿತಿ, ಮುದ್ದೇಬಿಹಾಳ) ಅವರು ಉದ್ಘಾಟಿಸಲಿದ್ದಾರೆ. ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಬಿ. ಕಟ್ಟಿಮನಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ರಾಮಮೂರ್ತಿ. ಎನ್., ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಶಶಿಕಾಂತ .ಶಿ. ಮಾಲಗತ್ತಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶಿವಮೂರ್ತಿ ಕುಂಬಾರ, ತಹಶೀಲ್ದಾರರಾದ ಶ್ರೀಮತಿ ಕೀರ್ತಿ ಚಾಲಕ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ವೆಂಕಟೇಶ ವಂದಾಲ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್. ಸಾವಳಗಿ, ಸಿ.ಪಿ.ಐ ಫಸಿವುದ್ದೀನ್ ಮಹ್ಮದ, ಕಾಲೇಜಿನ ಪ್ರಾಚಾರ್ಯರಾದ ಎಸ್.ಎಸ್.ಅಂಗಡಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಮಹತ್ವ ಮತ್ತು ಮಹಿಳಾ ಹಕ್ಕುಗಳ ಕುರಿತು ಮುದ್ದೇಬಿಹಾಳದ ನ್ಯಾಯವಾದಿಗಳಾದ ಶ್ರೀಮತಿ ರಶ್ಮಿ. ಬಿ. ಕುಲಕರ್ಣಿ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಸಹಾಯಕ ಸರ್ಕಾರಿ ಅಭಿಯೋಜಕರಾದ ನಾಗರಾಜ ಕೆ. ಪೂಜಾರ, ಬಸವರಾಜ ಆಹೇರಿ ಹಾಗೂ ಅಪರ ಸರ್ಕಾರಿ ವಕೀಲರಾದ ಎಚ್.ಎಲ್. ಸರೂರ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಲಿದ್ದಾರೆ. ಮಹಿಳಾ ಸಬಲೀಕರಣ ಮತ್ತು ಕಾನೂನು ಅರಿವು ಮೂಡಿಸುವ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಂಘಟಕರು ಪ್ರಕಟಣೆಯಲ್ಲಿ ಕೋರಿದ್ದಾರೆ.